Mysore
17
overcast clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಮ.ಬೆಟ್ಟ | ಅಪರಿಚಿತ ವಾಹನ ಡಿಕ್ಕಿ : ಜಿಂಕೆ ಸಾವು

ಹನೂರು : ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಿಂಕೆಯೊಂದು ರಸ್ತೆಯಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.

ಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ವೇಗವಾಗಿ ಸಾಗಿದ ಅಪರಿಚಿತ ವಾಹನ ಜಿಂಕೆಗೆ ಡಿಕ್ಕಿ ಹೊಡೆದಿದೆ. ಈ ಭಾಗದಲ್ಲಿ ಆಗಾಗ್ಗೆ ಇಂತಹ ಅಪಘಾತಗಳು ಸಂಭವಿಸುತ್ತಿರುವುದರಿಂದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ವಾಹನಗಳ ಅತಿವೇಗಕ್ಕೆ ನಿಯಂತ್ರಣ ಹಾಕಿ, ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Tags:
error: Content is protected !!