ಚಾಮರಾಜನಗರ

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಿಂದ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ 6ರಕ್ಕೂ ಹೆಚ್ಚು ಮಹಿಳೆಯರು ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದು ನಾಗಮಲೆಗೆ ಮೇ 10ರ ಸೋಮವಾರ ಬೆಳಗ್ಗೆ ತೆರಳುತ್ತಿದ್ದರು. ಬೆಳಗ್ಗೆ 7:45ರ ವೇಳೆ ಹರ್ಷಿತ್ ಎಂಬ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಗಾಯಗೊಂಡು ಸ್ಥಳದಲ್ಲಿಯೇ ಬಾಲಕ ಮೃತಪಟ್ಟಿದ್ದ.

ಅರಣ್ಯ ಇಲಾಖೆಯ ಸಿಬ್ಬಂದಿಗಳ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯ ನಿವಾಸಿಗಳು ಹಾಗೂ ಹೋರಾಟಗಾರರು ಅರಣ್ಯ ಇಲಾಖೆಯ ಕಾರ್ಯ ವೈಖರಿಯ ಬಗ್ಗೆ ಆಕ್ರೋಶ ಹೊರಹಾಕಿದ್ದರು.

ಚಿರತೆ ದಾಳಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆ ಎಚ್ಚೆತ್ತ ಅರಣ್ಯ ಇಲಾಖೆ ಚಿರತೆಯನ್ನು ಸೆರೆ ಹಿಡಿಯಲು ಈಗಾಗಲೇ ಅಗತ್ಯ ಕ್ರಮ ವಹಿಸಿ, ಚಿರತೆ ಚಲನವಲವನ್ನು ಪತ್ತೆಹಚ್ಚಲು ನಾಲ್ಕು ಥರ್ಮಲ್ ಡ್ರೋನ್ ಮುಖಾಂತರ ಪತ್ತೆ ಹಚ್ಚಲು ಕ್ರಮವಹಿಸಿ ಸ್ಥಳದಲ್ಲಿಯೇ ತಜ್ಞ ಪಶು ವೈದ್ಯಾಧಿಕಾರಿಗಳು ಮೊಕ್ಕಂ ಹೂಡಿದ್ದರು.

ಚಿರತೆ ಸೆರೆಗೆ 3 ಬೋನ್ ಬಳಕೆ: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಇಂಡಿಗನತ್ತ ಸಮೀಪ ಚಿರತೆ ದಾಳಿ ನಡೆಸಿ ಬಾಲಕ ಮೃತಪಟ್ಟ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಇಂಡಿಗನತ್ತ ನಾಗಮಲೆ ಮಾರ್ಗವಾಗಿ ಚಿರತೆಯನ್ನು ಸೆರೆ ಹಿಡಿಯಲು ಈಗಾಗಲೇ ಮೂರು ಬೋನ್ ಬಿಟ್ಟು ನಾಯಿ ಹಾಗೂ ಮೇಕೆ ಮರಿಗಳನ್ನು ಕಟ್ಟಲಾಗಿತ್ತು.

ಇದೀಗ 15 ದಿನಗಳ ನಂತರ ಚಿರತೆ ಕೊನೆಗೆ ಬಿದ್ದಿದ್ದು ಸ್ಥಳೀಯ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

1 hour ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

1 hour ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

2 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

16 hours ago