ಚಾಮರಾಜನಗರ

ಮ.ಬೆಟ್ಟದ ಆದಾಯವನ್ನು ಹಳ್ಳಿಗಳ ಅಭಿವೃದ್ಧಿಗೆ ಬಳಸಿ ; ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

ಚಾಮರಾಜನಗರ : ಜಿಲ್ಲೆಯ ಶ್ರೀಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯವನ್ನು ದೇವಾಲಯಕ್ಕೆ ಬರುವ ಆದಾಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರದ ಡಾ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ದೇವಾಲಯಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಬರುತ್ತದೆ. ಅದರಲ್ಲಿ ಸ್ಥಳೀಯ ಗ್ರಾಮಗಳನ್ನು ಅಭಿವೃದ್ಧಿ ಕಲ್ಪಿಸುವ ಬಗ್ಗೆ ತಿದ್ದುಪಡಿ ಮಾಡಬೇಕು. ದಶಕಗಳಿಂದಲೂ ಈ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಸಮರ್ಪಕವಾದ ರಸ್ತೆಗಳಿಲ್ಲದೆ ಸಂಚಾರಕ್ಕೆ ಬಹಳ ತೊಂದರೆ ಉಂಟಾಗುತ್ತಿದೆ. ಅಲ್ಲಿನ ಮಹಿಳೆಯರು ನೀರು ತರಲು ಪ್ರತಿನಿತ್ಯವೂ ಕಾಡಿನ ದುರ್ಗಮ ಹಾದಿಯಲ್ಲಿ ತೆರಳುವುದು ಶೋಚನೀಯ ಎಂದು ವಿಷಾಧಿಸಿದರು.

ರಸ್ತೆ ಸಂಪರ್ಕವಿಲ್ಲದ ಕಾರಣ ಗರ್ಭಿಣಿಯರ ಪ್ರಸವ ಸಂದರ್ಭದಲ್ಲಿ ಬಟ್ಟೆ ಜೋಲಿಯಲ್ಲಿ ಹೊತ್ತುಕೊಂಡು ಆಸ್ಪತ್ರೆ ದಾಖಲಿಸುವ ದಯನೀಯ ಸ್ಥಿತಿ ಎದುರಾಗಿದೆ. ತೀವ್ರ ಅಸ್ವಸ್ಥರಾದ ಹಿರಿಯ ರೋಗಿಗಳೂ ಕೂಡ ಮೈಲುಗಟ್ಟಲೆ ನಡೆದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಬೆಟ್ಟದಲ್ಲಿ ಅನೇಕ ವರ್ಷಗಳಿಂದ ವಾಸಿಸುತ್ತಿರುವ ಜನರೇ ಮಹದೇಶ್ವರ ಸ್ವಾಮಿಯ ನಿಜವಾದ ಭಕ್ತರು. ಅವರು ಕಾಡಿನ ಸಂರಕ್ಷಕರೂ ಅಗಿದ್ದಾರೆ. ದೇವಾಲಯದ ಅಭಿವೃದ್ಧಿಗೆ ಅಡ್ಡಿಯಿಲ್ಲ. ಜೊತೆಗೆ ಅಲ್ಲಿನ ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದೇವಸ್ಥಾನದ ಸಂಪನ್ಮೂಲವನ್ನು ವಿನಿಯೋಗಿಸಬೇಕು ಎಂದು ಒತ್ತಾಯಿಸಿದರು.

ಇತ್ತೀಚಿಗೆ ಸರ್ಕಾರವು ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಹಲವಾರು ಅಭಿವೃದ್ಧಿ ಯೋಜನೆ ಘೋಷಣೆ ಮಾಡಿ ಒಳ್ಳೆಯ ಕೆಲಸ ಮಾಡಿದೆ. ದೇವಾಲಯಕ್ಕೆ ಲಕ್ಷಾಂತರ ಜನರು ಭೇಟಿ‌ ನೀಡುತ್ತಾರೆ. ಶಕ್ತಿ ಯೋಜನೆಯಿಂದ ಮಹಿಳೆಯರ ಭೇಟಿ ಹೆಚ್ಚಾಗಿದೆ. ಹೀಗಾಗಿ ಎರಡನೇ ಹಂತದಲ್ಲಿ ಕಾವೇರಿ ನೀರು ತರುವ ಯೋಜನೆಯಿಂದ ಕುಡಿಯುವ ನೀರು ಪೂರೈಸಬೇಕು. ಚುನಾವಣೆ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರು ಮೂಲಭೂತ ಸೌಕರ್ಯ ಒತ್ತಾಯಿಸಿ ಮತದಾನ ಬಹಿಸ್ಕರಿದ್ದರು. ಮತಗಟ್ಟೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅವರೆಲ್ಲರ ಮೇಲೆ ಪ್ರಕರಣ ದಾಖಲಿಸಲಾಗಿದೆ. ನೀರು, ವಿದ್ಯುತ್, ಆಶ್ರಯದಿಂದ ವಂಚಿತರಾಗಿರುವ ಜನರ ಸಾಕ್ಷರತೆ ಪ್ರಮಾಣ ಹಾಗೂ ಜನರ ಆರೋಗ್ಯಮಟ್ಟ ಎಷ್ಟಿದೆ ಎಂಬುದನ್ನು ಗಮನಿಸಬೇಕಿದೆ ಎಂದು ಸದನದ ಗಮನಕ್ಕೆ ತರಲಾಯಿತು.

ಇದರ ಜೊತೆಗೆ ಮಲೆಮಹದೇಶ್ವರ ದೇವಾಲಯದಲ್ಲಿ ಹೊರಗುತ್ತಿದೆ ಹಾಗೂ ತಾತ್ಕಾಲಿಕವಾಗಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ಉದ್ಯೋಗಿಗಳನ್ನು ಖಾಯಂಗೊಳಿಸಬೇಕು. ಆ ಮೂಲಕ ಅವರ ಭವಿಷ್ಯ ರೂಪಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

1 hour ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

1 hour ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

1 hour ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

1 hour ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

1 hour ago