ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವ ಸಂದರ್ಭಗಳಲ್ಲಿ ಸಿಬ್ಬಂದಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು, ಲೋಪ ದೋಷ ಕಂಡು ಬಂದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಎಚ್ಚರಿಕೆ ನೀಡಿದರು.
ತಾಲೂಕಿನ ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜಯದಶಮಿ ಜಾತ್ರಾ ಸಂಬಂಧಪಟ್ಟ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾನವಮಿ ಆಯುಧ ಪೂಜೆ ವಿಜಯದಶಮಿ, ದೀಪಾವಳಿ ಜಾತ್ರಾ ಮಹೋತ್ಸವ ಸಂಬಂಧ ದಾಸೋಹ, ಲಾಡು ವಿಭಾಗ, ದರ್ಶನದ ವ್ಯವಸ್ಥೆ, ವಿಶೇಷ ದರ್ಶನ ಅತಿಥಿ ಗಣ್ಯರ ಸತ್ಕಾರ, ಶೌಚಾಲಯ ಮೇಲುಸ್ತುವಾರಿ, ಅಂತರಗಂಗೆ, ಕಲ್ಯಾಣಿ, ಸ್ವಚ್ಛತೆ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ಸಂಬಂಧಪಟ್ಟ ಸಿಬ್ಬಂದಿಗಳಿಗೆ ಜವಾಬ್ದಾರಿವಹಿಸಲಾಗಿದೆ. ಅಂತಹ ಕೆಲಸ ಕಾರ್ಯಗಳನ್ನು ಪ್ರತಿಯೊಬ್ಬರು ಮಾದಪ್ಪನಿಗೆ ಸೇವೆ ಮಾಡುತ್ತಿದ್ದೇವೆ ಎಂಬ ದೃಷ್ಟಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸಬೇಕು .ಒಂದೊಮ್ಮೆ ಯಾವುದಾದರು ಲೋಪ ಕಂಡು ಬಂದರೆ ಅಂತಹ ಸಿಬ್ಬಂದಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ನೌಕರರಿಗೆ ಪ್ರಾಧಿಕಾರದ ಬೈಲಾದಂತೆ ಮುಂದಿನ ದಿನಗಳಲ್ಲಿ ಆರನೇ ವೇತನ ಶ್ರೇಣಿಯಡಿ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು , ಕೆಲವು ನೌಕರರು ಆರನೇ ವೇತನ ಶ್ರೇಣಿ ಕೊಡಿಸುವುದಾಗಿ ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಯಾವ ಸಿಬ್ಬಂದಿಗಳು ಸಹ ಒಂದು ರೂಪಾಯಿ ಹಣವನ್ನು ನೀಡಬಾರದು. ನೀವು ನಿಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡಿದರೆ ನಾನು ನಿಮಗೆ ಖಂಡಿತವಾಗಿಯೂ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು.
ಶ್ರೀ ಕ್ಷೇತ್ರದ ನಾಗಮಲೆ ಭವನ, ಗಿರಿ ದರ್ಶಿನಿ, ಕಾರಯ್ಯ ಬಿಲ್ಲಯ್ಯ ಸೇರಿದಂತೆ ವಸತಿಗೃಹಗಳು ದುರಸ್ತಿಯಾಗಿರುವುದು ಗಮನಕ್ಕೆ ಬಂದಿದ್ದು ಎಲ್ಲವನ್ನು ಸರಿಪಡಿಸಲು ಕ್ರೀಯಾಯೋಜನೆ, ಸಿದ್ಧಪಡಿಸಲಾಗುತ್ತಿದೆ ಜಾತ್ರಾ ಮಹೋತ್ಸವ ಮುಗಿದ ಕೂಡಲೇ ಕಾಮಗಾರಿ ಪ್ರಾರಂಭಿಸಿ ಭಕ್ತಾದಿಗಳಿಗೆ ವಿನೂತನ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.
ಶೌಚಾಲಯ ದುರಸ್ತಿಗೆ ಕ್ರಮ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ಕೆಲವು ಶೌಚಾಲಯಗಳು ದುರಸ್ತಿಗೊಂಡಿರುವುದರಿಂದ ವಿಜಯದಶಮಿ ಜಾತ್ರಾ ಮಹೋತ್ಸವ ಪೂರ್ಣಗೊಂಡ ನಂತರ ದೀಪಾವಳಿ ಜಾತ್ರಾ ಮಹೋತ್ಸವದ ಒಳಗೆ ದುರಸ್ತಿ ಪಡಿಸಲು ಈಗಾಗಲೇ ಸಂಬಂಧಪಟ್ಟ ಅಭಿಯಂತರರಿಗೆ ಸೂಚನೆ ನೀಡಲಾಗಿದೆ ಎಂದರು.
ಕುಂದು ಕೊರತೆ ಸಭೆ: ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಗಳು ಪೂರ್ಣಗೊಂಡ ನಂತರ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳ ಕುಂದು ಕೊರತೆ ಸಭೆ ಕರೆಯಲಾಗುವುದು ತಮ್ಮ ಸಮಸ್ಯೆಗಳು ಏನೇ ಇದ್ದರೂ ನೇರವಾಗಿ ತಿಳಿಸಿದರೆ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಕ್ಷೇತ್ರದ ಪಾವಿತ್ರ್ಯತೆಗೆ ಸಹಕರಿಸಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ತಂಬಾಕು ಪದಾರ್ಥಗಳು, ಅಕ್ರಮ ಮದ್ಯ, ಮಾಂಸ ಮಾರಾಟ ನಡೆಯುತ್ತಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿದೆ. ಪ್ರಾಧಿಕಾರದ ಸಿಬ್ಬಂದಿಗಳ ಗಮನಕ್ಕೆ ಇದುವರೆಗೂ ಯಾವುದು ಬಂದಿಲ್ಲವಾ ಎಂದು ಪ್ರಶ್ನಿಸಿದರು. ಶ್ರೀ ಕ್ಷೇತ್ರದಲ್ಲಿ ತಂಬಾಕು ಬೀಡಿ, ಸಿಗರೇಟ್ ಪದಾರ್ಥಗಳು, ಮಧ್ಯ ಮಾರಾಟ ಸೇರಿದಂತೆ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಬರುವಂತಹ ಘಟನೆಗಳು ಕಂಡು ಬಂದರೆ ನೇರವಾಗಿ ನನಗೆ ತಿಳಿಸಿ ಸಂಬಂಧ ಪಟ್ಟವರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಉಪ ಕಾರ್ಯದರ್ಶಿ ಚಂದ್ರಶೇಖರ್ ದ್ವಿತೀಯ ದರ್ಜೆ ಸಹಾಯಕರುಗಳಾದ ಸರಗೂರು ಮಹಾದೇವಸ್ವಾಮಿ, ನಾಗರಾಜು, ಜನಾರ್ಧನ್ ಸ್ವಾಮಿ ಮಲ್ಲಿಕಾರ್ಜುನ್ ಪಾರುಪತ್ತೆ ದಾರ ಮಹಾಲಿಂಗನ ಕಟ್ಟೆ ಮಹಾದೇವಸ್ವಾಮಿ, ಲಾಡು ವಿಭಾಗದ ಮಹದೇವಸ್ವಾಮಿ, ಮಲ್ಲಿಕಾರ್ಜುನ್ ಶಾಸ್ತ್ರಿ ಕಿರಿಯ ಅಭಿಯಂತರ ಸೆಲ್ವ ಗಣಪತಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…
ಬೆಂಗಳೂರು: ಮಾರ್ಚ್.28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್…
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…