ಚಾಮರಾಜನಗರ

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು, ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅವರು ಪೊರಕೆ ಇಡಿದು ಸ್ವಚ್ಛತೆಯಲ್ಲಿ ಪಾಲ್ಗೊಂಡರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಎಲ್ಲೆಂದರಲ್ಲಿ ಕಸ ಚೆಲ್ಲಿದ್ದಾರೆ. ಬೇಸಿಗೆ ಕಾಲ ಆಗಿರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪೌರಕಾರ್ಮಿಕರು ದಿನದ 24 ಗಂಟೆಗಳಲ್ಲಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದಾರೆ. ಇವರ ಕಾರ್ಯವೈಖರಿಗೆ ಭಕ್ತಾದಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅವರು ಪೊರಕೆ ಹಿಡಿದು ದೇವಸ್ಥಾನದ ಮುಂಭಾಗ, ಲಾಡು ಮಾರಾಟ ಕೇಂದ್ರ, ರಾಜಗೋಪುರ ಮುಂಭಾಗ ಹಾಗೂ ಅಂತರಗಂಗೆ ಹೋಗುವ ರಸ್ತೆಯಲ್ಲಿ ಕಸ ಹೊಡೆಯುವ ಮೂಲಕ ಭಕ್ತಾದಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಪ್ರತಿ ಜಾತ್ರಾ ಮಹೋತ್ಸವಗಳಲ್ಲಿ ಪೌರಕಾರ್ಮಿಕರ ಜೊತೆಗೆ ಕಸ ಗುಡಿಸುವ ಮೂಲಕ ಸ್ವಚ್ಛತೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಅವರು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತ್ ಕನಸನ್ನು ನನಸು ಮಾಡಲು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿರವರು 2014ರಲ್ಲಿ ಸ್ವಚ್ಛ ಭಾರತ್ ಮಿಷನ್ ಆರಂಭಿಸಿದ್ದಾರೆ. ಇವರ ಕನಸು ಭಾರತವನ್ನು ಸ್ವಚ್ಛ ಮತ್ತು ಸುಂದರವಾಗಿಸುವುದೇ ಆಗಿದೆ.

ಅದೇ ರೀತಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನವೂ ಪ್ಲಾಸ್ಟಿಕ್ ಮುಕ್ತ ಹಸಿರು ವಲಯ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದ್ದು. ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ ಕವರ್‌ಗಳನ್ನು ತಯಾರು ಮಾಡಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಕಂಪನಿಯ ಮುಖಾಂತರ ಪರಿಸರ ಸ್ನೇಹಿ ಕವರ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಳಿಗೆ ಪಡೆದಿರುವ ವ್ಯಾಪಾರಸ್ಥರು ಭಕ್ತಾದಿಗಳು ಪರಿಸರ ಸ್ನೇಹಿ ಕವರ್‌ಗಳನ್ನು ಬಳಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟದ ಪರಿಸರ ಸಂರಕ್ಷಣೆ ಮಾಡುವಲ್ಲಿ ಸಹಕಾರ ನೀಡಬೇಕು ಎಂದರು.

ಇನ್ನು ಜಾತ್ರಾ ಮಹೋತ್ಸವದ ಅಂಗವಾಗಿ ಪೌರಕಾರ್ಮಿಕರು ನಿರಂತರವಾಗಿ ತಮ್ಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇವಸ್ಥಾನದ ಆವರಣ ಸ್ವಚ್ಛವಾಗಿರಲು ಪೌರಕಾರ್ಮಿಕರ ಶ್ರಮ ಅತ್ಯಂತ ಪ್ರಮುಖವಾಗಿದೆ. ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ಬಾರಿಯ ಜಾತ್ರೆಯಂತೆ ಈ ಬಾರಿಯೂ ಅವರ ಜೊತೆಗೆ ಸೇರಿ ಸ್ವಚ್ಛತೆ ಮಾಡಿ ನಾನು ಕೂಡ ಮಾದಪ್ಪನ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.

 

ಆಂದೋಲನ ಡೆಸ್ಕ್

Recent Posts

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

4 hours ago

ಎಸ್‌ಐಆರ್: ಪ್ರತಿಭಟನೆ ಹತ್ತಿಕ್ಕುವ ಯತ್ನ ಸರಿಯಲ್ಲ

ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಳ್ಳಲು ಹೊರಟಿದೆ ಎಂದು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಲಿತ ಚಳವಳಿಗೆ ಬೇಕಾಗಿದೆ ‘ಹೊಳಪು’

ಆಶಾದಾಯಕ ಕನಸು ಬಿತ್ತುವ ಕೆಲಸಕ್ಕೆ ಚಾಲನೆ ಸಿಗಬೇಕು ಕರ್ನಾಟಕದ ರಾಜಕೀಯ ಚರಿತ್ರೆಯ ದಿಕ್ಕು ೧೯೮೩ ರಲ್ಲಿ ಬದಲಾಯಿತು. ಅರ್ಥಾತ್, ಸ್ವಾತಂತ್ರ್ಯೋತ್ತರ…

4 hours ago

ನಾವು ಇಂದು ಸರೆಂಡರ್ ಆಗಲ್ಲ

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಡೆಡ್ ಬಾಡಿ ಬಿಸಾಕುವ ಸಮಯದಲ್ಲಿ ರಾಘವೇಂದ್ರ ಮತ್ತು ಕಾರ್ತಿಕ್ ಮಧ್ಯೆ ಗಲಾಟೆಯಾಗಿ, ಆತ ಸರೆಂಡರ್…

4 hours ago

ನಾಳೆಯಿಂದ ಮಡಿಕೇರಿಯಲ್ಲಿ ಕಾಫಿ ದಸರಾ ಸಂಭ್ರಮ

ನವೀನ್ ಡಿಸೋಜ ೫೦ ಮಳಿಗೆಗಳಲ್ಲಿ ಕಾಫಿ ವೈವಿಧ್ಯ; ೧೩ ಸಾಧಕ ಕೃಷಿಕರಿಗೆ ಸನ್ಮಾನ, ೬೮ ಪೌರಕಾರ್ಮಿಕರಿಗೆ ಗೌರವ ಮಡಿಕೇರಿ: ಮಂಜಿನ…

4 hours ago

ಎಚ್.ಡಿ.ಕೋಟೆಯಲ್ಲಿ ರಂಗೇರಿದ ನವರಾತ್ರಿ ಉತ್ಸವ

ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ೯ ದಿನಗಳು ವಿವಿಧ ಕಾರ್ಯಕ್ರಮ ಎಚ್.ಡಿ.ಕೋಟೆ: ವಿಶ್ವ ವಿಖ್ಯಾತ ಮೈಸೂರು ದಸರಾ ಭಾನುವಾರ…

4 hours ago