ಚಾಮರಾಜನಗರ

ಮಹದೇಶ್ವರ ಬೆಟ್ಟ | ರಸ್ತೆಬದಿಯಲ್ಲೇ ಮತ್ತೆ ಚಿರತೆ ಪ್ರತ್ಯಕ್ಷ ; ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ ಸಾಗುತ್ತಿದ್ದಂತೆ ಚಿರತೆ ಅರಣ್ಯದಲ್ಲಿ ಕುಳಿತು ಮಿಶ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಹನೂರು ಪಟ್ಟಣದ ಕಂದಾಯ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರದೀಪ್ ಹಾಗೂ ಕುಟುಂಬಸ್ಥರು ಶ್ರೀ ಕ್ಷೇತ್ರ ಮಲೆ ಬೆಟ್ಟಕ್ಕೆ ಶುಕ್ರವಾರ ಬೆಳಗ್ಗೆ 8:30ರ ವೇಳೆ ತೆರಳುತ್ತಿದ್ದಾಗ ರಸ್ತೆಯ ಬಲಬದಿಯಿಂದ ಎಡಬದಿಗೆ ನಡೆದುಕೊಂಡು ರಸ್ತೆ ದಾಟುತ್ತಿತ್ತು ಆದರೆ ವಾಹನ ಬರುತ್ತಿದ್ದಂತೆ. ವಾಪಸ್ ತೆರಳಿ ಕುಳಿತುಕೊಂಡು ನೆರಳಿನಲ್ಲಿ ವಿಶ್ರಮಿಸುತ್ತಿದೆ. ಇದನ್ನು ಪ್ರದೀಪ್ ಸ್ನೇಹಿತರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಮಲೆ ಮಾದೇಶ್ವರ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು ದ್ವಿಚಕ್ರ ವಾಹನದಲ್ಲಿ ಬರುವಂತಹ ಭಕ್ತಾದಿಗಳು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

ಕೈಕಟ್ಟಿ ಕುಳಿತ ಅರಣ್ಯ ಇಲಾಖೆ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದ. ಇದಾದ ಕೆಲವು ದಿನಗಳಲ್ಲಿಯೇ ಪಾದಯಾತ್ರೆ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತು ಮಾಡುತ್ತಿದ್ದರು.ಆದರು ಚಿರತೆ ಆಗಾಗ ರಂಗಸ್ವಾಮಿ ಒಡ್ಡು ಹಾಗೂ ಶನೇಶ್ವರ ದೇವಸ್ಥಾನದ ಸಮೀಪ ಕಾಣಿಸಿಕೊಳ್ಳುತ್ತಲೇ ಇತ್ತು. ಆದರೂ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಲ್ಲಿ ವಿಫಲರಾಗಿದ್ದಾರೆ.

ಅದೇ ರೀತಿ ಶುಕ್ರವಾರವೂ ಸಹ ತಾಳುಬಟ್ಟದಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ 7ನೇ ತಿರುವಿನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ.

ಇನ್ನು ಮುಂದಾದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಚಿರತೆ ಸೆರೆಹಿಡಿದು ಬೇರೆಡೆಗೆ ಸ್ಥಳಾಂತರ ಮಾಡಬೇಕು. ಮುಂದೆ ಯಾವುದಾದರೂ ಅನಾಹುತ ಸಂಭವಿಸಿದರೆ ಇದಕ್ಕೆ ಕಾರಣ ಅರಣ್ಯ ಇಲಾಖೆಯ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಪ್ರಜ್ಞಾವಂತ ನಾಗರಿಕರು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಿಪಂ, ತಾಪಂ ಕರಡು ಮೀಸಲಾತಿ ಪ್ರಕಟ; ಗರಿಗೆದರಿದ ರಾಜಕೀಯ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…

4 mins ago

ಈ ಬಾರಿ ಅಂಬಾರಿ ಹೊರುವ ಸಾರಥಿ ಯಾರು.?

ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್‌, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…

10 mins ago

ಇಂದಿನಿಂದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭ

ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…

30 mins ago

ದಸರಾ ಸಂಭ್ರಮ ಶುರು

ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ  ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…

39 mins ago

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

18 hours ago