ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಶ್ರೀ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಡಾ.ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು , ಬೇಡಗಂಪಣ ಅರ್ಚಕರು ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ತೇರನ್ನು ವಿವಿಧ ಬಗೆಯ ಪುಷ್ಪಗಳು, ತಳಿರು ತೋರಣ, ಬಣ್ಣದ ಬಟ್ಟೆಗಳಿಂದ ಸಿಂಗರಿಸಲಾಗಿತ್ತು.
ರಥೋತ್ಸವಕ್ಕೂ ಮುನ್ನ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಬೇಡಗಂಪಣ ಆರ್ಚಕ ವೃಂದದವರು ದೇಗುಲದ ಗರ್ಭಗುಡಿಯಲ್ಲಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಆನೆ ಉತ್ಸವ ನೆರವೇರಿಸಲಾಯಿತು. ನಂತರ ಮಲೆ ಮಹದೇಶ್ವರ ಬೆಟ್ಟದ ಸಾಕಾನೆ ಉಮಾ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿದ ಬಳಿಕ ತೇರಿನ ಬಳಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ನಂತರ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಯಿತು. ದೇಗುಲದ ಮುಖ್ಯದ್ವಾರದ ಆವರಣದಿಂದ ಸತ್ತಿಗೆ ಸೂರಿಪಾನಿ, ಛತ್ರಿ, ಚಾಮರ, ನಂದಿಧ್ವಜ ಹಾಗೂ ಮಂಗಳ ವಾದ್ಯದೊಂದಿಗೆ ತೇರನ್ನು ಎಳೆಯಲಾಯಿತು. ಹುಲಿ ವಾಹನ, ಬಸವ ವಾಹನ ಹಾಗೂ ರುದ್ರಾಕ್ಷಿ ವಾಹನೋತ್ಸವವು ನಡೆಯಿತು. ವೀರಗಾಸೆ ಕುಣಿತ ಭಕ್ತಾದಿಗಳ ಗಮನ ಸೆಳೆಯಿತು. ಭಕ್ತರು ತೇರಿಗೆ ಹಣ್ಣು ಜವನ, ದವಸ ಧಾನ್ಯಗಳನ್ನು ಎಸೆದು ಪ್ರಾರ್ಥಿಸಿದರು.
ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಲಕ್ಷಾಂತರ ಜನರು ರಥೋತ್ಸವದಲ್ಲಿ ಭಾಗವಹಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ನೆರೆದಿದ್ದ ಭಕ್ತರು ಉಘೇ ಮಾದಪ್ಪ…ಉಘೇ ಮಾಯ್ಕಾರ… ಎಂದು ತೇರನ್ನು ಎಳೆಯಲು ಮುಂದಾದಾಗ ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಕೊಳ್ಳೇಗಾಲ ಡಿವೈಎಸ್ಪಿ ಧರ್ಮೇಂದ್ರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಐದು ದಿನಗಳಿಂದ ಮ.ಬೆಟ್ಟದಲ್ಲಿ ಬೀಡು ಬಿಟ್ಟಿದ್ದ ಭಕ್ತಾದಿ ಗಳು ಬುಧವಾರ ರಥೋತ್ಸವ ಮುಗಿದ ಬಳಿಕ ತಮ್ಮ ತಮ್ಮ ಊರುಗಳಿಗೆ ಹಿಂದಿರುಗಿದರು. ಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ವಾರದ ಹಿಂದೆ 2 ಲಕ್ಷಕ್ಕೂ ಹೆಚ್ಚಿನ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸಿ ಬೀಡು ಬಿಟ್ಟಿದ್ದರು. ಅಲ್ಲದೆ ಎರಡು ದಿನಗಳಿಂದ ವಾಹನಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಸ್ಥಾನದ ರಂಗಮಂದಿರ ಹಾಗೂ ಇನ್ನಿತರ ವಸತಿಗೃಹಗಳಲ್ಲಿ ವಾಸ್ತವ್ಯ ಹೂಡಿದ್ದರು.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…