Mysore
21
overcast clouds

Social Media

ಮಂಗಳವಾರ, 21 ಜುಲೈ 2026
Light
Dark

ಮಹದೇಶ್ವರಬೆಟ್ಟ ಠಾಣೆ ಮುಖ್ಯಪೇದೆ ಅಮಾನತ್ತು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಲಾರಿ ಚಾಲಕನ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪೊಲೀಸ್ ಮುಖ್ಯಪೇದೆಯನ್ನು ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಠಾಣೆ ಮುಖ್ಯಪೇದೆ ಸಿದ್ದರಾಜು ಅಮಾನತ್ತುಗೊಂಡವರು.

ಹನೂರಿನಿಂದ ತಮಿಳುನಾಡಿಗೆ ಜೋಳ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನಿಂದ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯಪೇದೆ ಸಿದ್ದರಾಜು ಅವರನ್ನು ಹಣ ಕೊಡುವಂತೆ ಪೀಡಿಸಿದ್ದಾರೆ.

ಈ ವೇಳೆ ಚಾಲಕ ೫೦ ರೂ. ನೀಡಿದ್ದರು. ಆದರೆ ಮುಖ್ಯಪೇದೆ ೨೦೦ ರೂ. ನೀಡಬೇಕು, ಇಲ್ಲದಿದ್ದರೆ ಲಾರಿಯನ್ನು ಬಿಡುವುದಿಲ್ಲ ಎಂದು ಏರುಧ್ವನಿಯಲ್ಲಿ ಮಾತನಾಡಿದ್ದಾರೆ. ಇದನ್ನು ಲಾರಿ ಚಾಲಕ, ಬಂಡಳ್ಳಿ ಮೂಲದ ಸುಲ್ತಾನ್ ಎಂಬುವವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ಇದನ್ನು ಗಮನಿಸಿದ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಅವರು, ಸಾರ್ವಜನಿಕರ ಜೊತೆ ಅಸಭ್ಯ ವರ್ತನೆ ಹಾಗೂ ಕರ್ತವ್ಯ ಲೋಪ ಎಸಗಿರುವ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಮುಖ್ಯಪೇದೆ ಸಿದ್ದರಾಜು ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Tags:
error: Content is protected !!