ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ ವಿಧಿಸಲಾಗಿದ್ದು, ಪಾದಯಾತ್ರೆ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿದ್ದರ ಪರಿಣಾಮ ಈ ನಿರ್ಬಂಧ ಹೇರಲಾಗಿದೆ.
ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ ತಡರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದರು. ಈ ವೇಳೆ ಪ್ರವೀಣ್ ಎಂಬ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಮಲೇ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳಲು ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳಲು ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಚಿರತೆಯನ್ನ ಸೆರೆ ಹಿಡಿಯ ಬೇಕಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ದಿನಾಂಕ ಜನವರಿ 21ರ ಸಂಜೆ 6 ಗಂಟೆಯಿಂದ ಜನವರಿ 24ರ ಮಧ್ಯರಾತ್ರಿವರೆಗೆ ನಿರ್ಬಂಧಿಸಿದ್ದಾರೆ.
ಈ ನಿಷೇಧಾಜ್ಞೆಯು ಸದರಿ ಚಿರತೆ ಸೆರೆ ಕಾರ್ಯಾಚರಣೆಯಲ್ಲಿ ಭಾಗವಹಿಸುವ ಅರಣ್ಯ ಸಿಬ್ಬಂದಿಗಳು ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿಗಳು, ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.





