ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ್ದ ಚಿರತೆ ಸೆರೆ ಹಿಡಿಯುವ ಕಾರ್ಯಚರಣೆ ಮುಂದುವರೆದಿದ್ದು ಡ್ರೋನ್ ಕ್ಯಾಮೆರಾದಲ್ಲಿ ಚಿರತೆ ಚಲನ ವಲನದ ನಿಗಾವಹಿಸಲಾಗಿದೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದ ಪ್ರವೀಣ್ ಹಾಗೂ ಸ್ನೇಹಿತರು ಪಾದಯಾತ್ರೆಯ ಮೂಲಕ ಜನವರಿ 21ರ ಬುಧವಾರ ಬೆಳಗ್ಗೆ ತಾಳಬೆಟ್ಟದಿಂದ ಪಾದಯಾತ್ರೆ ಹೊರಟಿದ್ದರು. ರಂಗಸ್ವಾಮಿ ಒಡ್ಡಿನ ಸಮೀಪ ಪಾದಯಾತ್ರೆ ತೆರಳುತ್ತಿದ್ದ ಪ್ರವೀಣನ ಮೇಲೆ ಬೃಹತ್ ಗಾತ್ರದ ಚಿರತೆ ದಾಳಿ ನಡೆಸಿ ಅರಣ್ಯಕ್ಕೆ ಎಳೆದೊಯ್ಯುತ್ತಿತ್ತು ಪರಿಣಾಮ ಪ್ರವೀಣ್ ಅರಣ್ಯದಲ್ಲಿ ಮೃತಪಟ್ಟಿದ್ದರು.
ಈ ಸಂಬಂಧ ಶಾಸಕ ಎಂ.ಆರ್ ಮಂಜುನಾಥ್ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ ಚಿರತೆಯನ್ನು ಸೆರೆ ಹಿಡಿಯುವಂತೆ ಸೂಚನೆ ನೀಡಿದ್ದರು. ಅವರ ಸೂಚನೆಯಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ಹಾಗೂ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದರು.
ರಂಗಸ್ವಾಮಿ ಒಡ್ಡಿನ ಸಮೀಪ ಆಗಾಗ ಕಾಣಿಸಿಕೊಳ್ಳುತ್ತಿದ್ದ ಸಮೀಪದಲ್ಲಿ ಚಿರತೆ ಸೆರೆ ಹಿಡಿಯಲು ಎರಡು ಬೋನುಗಳನ್ನು ಇಡಲಾಗಿದ್ದು ಬೋನಿನಲ್ಲಿ ಎರಡು ನಾಯಿಗಳನ್ನು ಸಹ ಕಟ್ಟಲಾಗಿದೆ. ಜೊತೆಗೆ, ಚಿರತೆ ಕಾರ್ಯಾಪಡೆ, ಕೂಬಿಂಗ್,ಡ್ರೋನ್ ತಂಡ ಸ್ಥಳದಲ್ಲಿಯೇ ಇದ್ದು ಚಿರತೆ ಸೆರಡಿಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಚಿರತೆಯು ರಂಗಸ್ವಾಮಿ ಒಡ್ಡಿನ ಸಮೀಪದಲ್ಲಿಯೇ ಸಂಚರಿಸುತ್ತಿರುವುದನ್ನು ಡ್ರೋನ್ ಕ್ಯಾಮರದಲ್ಲಿ ಪತ್ತೆಹಚ್ಚಲಾಗಿದ್ದು ಚಿರತೆ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿಯೇ ಸಂಚರಿಸುತ್ತಿದೆ ಎಂದು ಅರಣ್ಯ ಇಲಾಖೆಯ ಬಲ್ಲಮೂಲಗಳಿಂದ ತಿಳಿದು ಬಂದಿದೆ.
ಪಾದಯಾತ್ರಿಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ಹಿಡಿಯಲು ಈಗಾಗಲೇ ಕಾರ್ಯಾಚರಣೆ ಮುಂದುವರಿಸಲಾಗಿದೆ ಡ್ರೋನ್ ಕ್ಯಾಮರದಲ್ಲಿ ಚಿರತೆ ಚಲನವಲನದ ಬಗ್ಗೆ ನಿಗ ವಹಿಸಲಾಗಿದ್ದು ಚಿರತೆ ಇರುವ ಸ್ಥಳವನ್ನು ಖಚಿತಪಡಿಸಿಕೊಳ್ಳಲಾಗಿದೆ. ಅತಿ ಶೀಘ್ರದಲ್ಲಿಯೇ ಚಿರತೆಯನ್ನು ಸೆರೆ ಹಿಡಿಯಲಾಗುವುದು ಎಂದು ಮಲೆ ಮಹದೇಶ್ವರ ವನ್ಯ ಧಾಮ ಡಿಸಿಎಫ್ ಭಾಸ್ಕರ್ ತಿಳಿಸಿದ್ದಾರೆ.





