ಹನೂರು: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ಸ್ವಾಮಿಗೆ ಎಣ್ಣೆಮಜ್ಜನ ಸೇವೆಯನ್ನು ಸಾಂಪ್ರದಾಯಿಕವಾಗಿ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಹಾಲಯ ಜಾತ್ರೆ ಅಮಾವಾಸ್ಯೆ ಅಂಗವಾಗಿ ದೇಗುಲವನ್ನು ವಿವಿಧ ಬಗೆಯ ಪುಷ್ಪಗಳು ಹಾಗೂ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ದೇವಸ್ಥಾನದ ಹೊರ ಆವರಣ, ಒಳ ಆವರಣ ರಾಜಗೋಪುರ, ಬಸ್ ನಿಲ್ದಾಣ ಸೇರಿದಂತೆ ಇನ್ನಿತರ ಕಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಇಂದು ಸಂಜೆ ಬೇಡಕಂಪಣ ಸರದಿ ಅರ್ಚಕರು ಮಾದಪ್ಪನಿಗೆ ವಿವಿಧ ಅಭಿಷೇಕ ನೆರವೇರಿಸಿದರು. ಬಳಿಕ ಎಣ್ಣೆ ಮಜ್ಜನ ಸೇವೆ ನೆರವೇರಿಸಿ ಮಾದಪ್ಪನ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಯಿತು. ದೀಪ ದೀಪದಾರತಿ ಹಾಗೂ ಮಹಾಮಂಗಳಾರತಿ ಬೆಳಗಿಸಲಾಯಿತು. ಈ ಮೂಲಕ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆಯು ಸಾಂಪ್ರದಾಯಿಕವಾಗಿ ನೆರವೇರಿತು.
ಇಂದು ಬೆಳಿಗ್ಗೆ 8 ಗಂಟೆಯ ಸಮಯದಲ್ಲಿ ನಡೆದ ಬೆಳ್ಳಿ ರಥೋತ್ಸವ, ಹುಲಿವಾಹನ, ರುದ್ರಾಕ್ಷಿ ಮಂಟಪ ಬಸವ ವಾಹನ, ರಾತ್ರಿ ಚಿನ್ನದ ರಥೋತ್ಸವದಲ್ಲಿ ಸಾವಿರಾರು ಸಾರ್ವಜನಿಕರು ಪಾಲ್ಗೊಂಡಿದ್ದರು. ಹರಕೆ ಹೊತ್ತು ಸಾರ್ವಜನಿಕರು ದೇಗುಲದ ಸುತ್ತ ದಂಡಿನ ಕೋಲು ಹೊತ್ತು ಪ್ರದಕ್ಷಿಣೆ ಹಾಕುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು. ಅಲ್ಲಿ ನೆರೆದಿದ್ದ ಎಲ್ಲರೂ ಮಹದೇಶ್ವರನಿಗೆ ಘೋಷಣೆ ಕೂಗಿ ಭಕ್ತಿ ಭಾವ ಮೆರೆದರು.
ಮಹಾಲಯ ಅಮಾವಾಸ್ಯೆ ಜಾತ್ರೆಗೆ ಆಗಮಿಸಿದ್ದ ಸಾವಿರಾರು ಜನರು ಮುಡಿ ಸೇವೆ, ಉರುಳು ಸೇವೆ, ಪಂಜಿನ ಸೇವೆ ಹಾಗೂ ರಜಾ ಹೊಡೆಯುವ ಸೇವೆಗಳಲ್ಲಿ ಭಾಗವಹಿಸಿ ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು.
ದೇವಸ್ಥಾನದ ಹೊರ ಆವರಣದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದ ಹಿನ್ನೆಲೆ ಉರುಳು ಸೇವೆಗೆ ತೊಂದರೆಯಾಗಿತ್ತು. ಈ ನಿಟ್ಟಿನಲ್ಲಿ ಪ್ರಾಧಿಕಾರದ ವತಿಯಿಂದ ದೇವಸ್ಥಾನದ ಹೊರ ಆವರಣದಲ್ಲಿ ಬಿಸಿಲಿನ ವೇಳೆ ನಿರಂತರವಾಗಿ ನೀರು ಸಿಂಪಡಣೆ ಮಾಡುವ ಮೂಲಕ ಸಾರ್ವಜನಿಕರ ಉರುಳು ಸೇವೆಗೆ ಅವಕಾಶ ಮಾಡಿಕೊಟ್ಟರು.
ಸಾರ್ವಜನಿಕರಿಗೆ ಸಂತಸ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನದಲ್ಲಿ ಇತ್ತೀಚೆಗೆ ಕೆಲವೊಂದು ಬದಲಾವಣೆ ತಂದು ಬೆಳಗಿನ ಸಮಯದಲ್ಲಿ ಉಪ್ಪಿಟ್ಟು, ಕೇಸರಿಬಾತು, ಪಲಾವ್, ಚಿತ್ರಾನ್ನ ಪುಳಿಯೋಗರೆ ಮಾಡಲಾಗುತ್ತಿದೆ. ಅದೇ ರೀತಿ ಮಧ್ಯಾಹ್ನದ ಊಟಕ್ಕೆ ಪಾಯಸ, ಸಿಹಿ ಬೂಂದಿ, ಅನ್ನ, ಸಾಂಬಾರ್, ಪಲ್ಯ, ಮಜ್ಜಿಗೆ ಹುಳಿ ವಿತರಣೆ ಮಾಡಲಾಗುತ್ತಿದೆ. ದಾಸೋಹ ಭವನದಲ್ಲಿ ಪ್ರಸಾದ ಬದಲಾವಣೆ ಮಾಡಿರುವುದಕ್ಕೆ ಬೆಂಗಳೂರಿನ ಶಾಂತಿ ಸಾಗರ್ ಹೋಟೆಲ್ ಮಾಲೀಕರು ಪ್ರಸಾದ ಸ್ವೀಕರಿಸಿ ಪ್ರಾಧಿಕಾರದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಸಾದ ಬಡಿಸಿದ ಕಾರ್ಯದರ್ಶಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನದ ಪರಿಶೀಲನೆಗೆ ತೆರಳಿದ ಕಾರ್ಯದರ್ಶಿಗಳು ಸ್ವತಃ ಸಾರ್ವಜನಿಕರಿಗೆ ಪ್ರಸಾದ ಬಡಿಸಿದ್ದಾರೆ. ಬಳಿಕ ಅಲ್ಲಿ ಜನರ ಜೊತೆಯಲ್ಲಿ ಕುಳಿತು ಪ್ರಸಾದ ಸ್ವೀಕರಿಸುವ ಮೂಲಕ ಅವರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ.
ಮಹಾಲಯ ಜಾತ್ರಾ ಮಹೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ದಾಸೋಹದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಿ, ಗುಣಮಟ್ಟದ ತರಕಾರಿ ಹಾಗೂ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಪ್ರಸಾದ ತಯಾರು ಮಾಡಿ ವಿತರಿಸಲಾಗುತ್ತಿದೆ. ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆಯುವ ಜನರಿಗೆ ಶುದ್ಧ ಕುಡಿಯುವ ನೀರು, ಜರ್ಮನ್ ಟೆಂಟ್ ಗಳನ್ನು ಹಾಕುವ ಮೂಲಕ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…