ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ದೇವಾಲಯದ ಆವರಣದ ಸುತ್ತಲಿನ ಪ್ರದೇಶಗಳಲ್ಲಿ ವಿಶೇಷ ಹೂವಿನ ಅಲಂಕಾರ, ವಿವಿಧ ಫಲ ಫುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು.
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರಿಗೆ ವಿಶೇಷ ದಾಸೋಹ ವ್ಯವಸ್ಥೆ ಮಾಡಲಾಗಿದೆ.
ಅಮಾವಾಸ್ಯೆ ಪ್ರಯುಕ್ತ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ನೆರೆಯ ರಾಜ್ಯಗಳಿಂದಲೂ ಲಕ್ಷಾಂತರ ಜನರು ಆಗಮಿಸಿ, ಸರದಿ ಸಾಲಿನಲ್ಲಿ ನಿಂತಿ ಪವಾಡ ಪುರುಷನ ದರ್ಶನ ಪಡೆದರು.
ಮಹಾಲಯ ಅಮಾವಾಸ್ಯೆ ಪ್ರಯುಕ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.





