Mysore
23
light intensity drizzle

Social Media

ಗುರುವಾರ, 26 ಡಿಸೆಂಬರ್ 2024
Light
Dark

ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಹನೂರು: ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ಮಾನವೀಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ವ್ಯಕ್ತಿ ಎಂದು ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು ಬಣ್ಣಿಸಿದರು.

ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಡೀ ವಿಶ್ವಕ್ಕೆ ರಾಮರಾಜ್ಯವನ್ನು ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ. ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ. ದೇಶದ ಅನೇಕ ಭಾಷೆಗಳಲ್ಲಿ ರಾಮಾಯಣ ಮಹಾಕಾವ್ಯವನ್ನು ಆಧರಿಸಿ ರಚನೆಯಾಗಿದ್ದರು, ವಾಲ್ಮೀಕಿ ರಾಮಾಯಣಕ್ಕೆ ತನ್ನದೇ ಆದ ಮಹತ್ವವಿದೆ ಎಂದರು.

ವಾಲ್ಮೀಕಿ ರಾಮಾಯಣ ಬೋಧಿಸುವ ಆದರ್ಶಗಳನ್ನು ಬುದ್ಧ, ಬಸವ, ಕನಕದಾಸ, ಅಂಬೇಡ್ಕರ್ ರವರು ಕೂಡ ಬೋಧಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಮಹನೀಯರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪ ಕಾರ್ಯದರ್ಶಿ ಚಂದ್ರಶೇಖರ್, ದ್ವಿತೀಯ ದರ್ಜೆ ಸಹಾಯಕರುಗಳಾದ ಸರಗೂರು ಮಹಾದೇವಸ್ವಾಮಿ, ಜನಾರ್ಧನ್, ನಾಗರಾಜು, ಮಲ್ಲಿಕಾರ್ಜುನ್, ಸ್ವಾಮಿ, ಆಗಮಿಕರಾದ ಪ್ರಸಾದ್, ಕರವೀರಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags: