ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ.

ಇಂದಿನಿಂದ ಮಾರ್ಚ್‌.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಆಗಮಿಸಲಿದ್ದಾರೆ.

ಕರ್ನಾಟಕ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭೇಟಿ ನೀಡಲಿದ್ದು, ಬೆಟ್ಟದಲ್ಲಿ ಕಾಲಿಡಲು ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಈ ಜಾತ್ರೆಗೆ ಲಕ್ಷಾಂತರ ಮಂದಿ ಬೆಟ್ಟಕ್ಕೆ ತೆರಳುವುದರಿಂದ ಇಂದಿನಿಂದ ಮಾರ್ಚ್.1ರವರೆಗೆ ಐದು ದಿನಗಳ ಕಾಲ ದ್ವಿಚಕ್ರ ವಾಹನ, ಆಟೋರಿಕ್ಷಾ, ಗೂಡ್ಸ್‌ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ.

ನಾಳೆ ಮಹಾಶಿವರಾತ್ರಿಯಂದು ಪವಾಡ ಪುರುಷ ಮಲೆ ಮಹದೇಶ್ವರನಿಗೆ ಎಣ್ಣೆ ಮಜ್ಜನ ಸೇವೆ ನಡೆಯಲಿದ್ದು, ರಾತ್ರಿಯಿಡೀ ಜಾಗರಣೆ, ಉತ್ಸವ, ವಿಶೇಷ ಅಭಿಷೇಕ, ಪೂಜೆ-ಪುನಸ್ಕಾರಗಳು ನಡೆಯಲಿವೆ.

ಇನ್ನು ಫೆಬ್ರವರಿ.27ರಂದು ವಿಶೇಷ ಸೇವೆ ಉತ್ಸವಾಧಿಗಳು ನಡೆಯಲಿದ್ದು, 28ರಂದು ಅಮಾವಾಸ್ಯೆ ಪೂಜೆ ಹಾಗೂ ಮಾರ್ಚ್‌.1ರಂದು ಮಹದೇಶ್ವರನ ಮಹಾರಥೋತ್ಸವ ನಡೆಯಲಿದೆ.

ಐದು ದಿನಗಳ ಕಾಲ ಜಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಸಾರ್ವಜನಿಕರು ಪಾದಯಾತ್ರೆ ಮೂಲಕ ತೆರಳುತ್ತಿದ್ದಾರೆ. ಇನ್ನು ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

21 mins ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

1 hour ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

1 hour ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

2 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

2 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

6 hours ago