ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 34 ದಿನಗಳ ಅವಧಿಯಲ್ಲಿ 2.65 ಕೋಟಿ ರೂ. ಸಂಗ್ರಹವಾಗಿದೆ.
ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 7.30 ಗಂಟೆಯವರೆಗೂ ನಡೆಯಿತು.
ಸರ್ಕಾರಿ ರಜಾ ದಿನ, ಅಮಾವಾಸ್ಯೆ ಜಾತ್ರಾ ಮಹೋತ್ಸವ ಸೇರಿದಂತೆ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,65,04,712ರೂ. ನಗದು, 58 ಗ್ರಾಂ ಚಿನ್ನ ಹಾಗೂ 2,070 ಕೆಜಿ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಇದಲ್ಲದೆ ಇ-ಹುಂಡಿಯಿಂದ 66,6104 ರೂ., 15 ವಿದೇಶಿ ನೋಟುಗಳು, ಚಲಾವಣೆಯಲ್ಲಿ ಇಲ್ಲದ 2,000 ರೂ. ಮುಖಬೆಲೆಯ 36 ನೋಟುಗಳು ಹುಂಡಿಯಲ್ಲಿ ಸಂಗ್ರಹವಾಗಿವೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾಧಿಕ್ಷಕ ಮಹದೇವ್, ಪ್ರಾಧಿಕಾರದ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಬಸವಣ್ಣ, ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು, ಪೊಲೀಸ್ ಅಧಿಕಾರಿಗಳು, ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…