ಚಾಮರಾಜನಗರ : ಮಹಾ ಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಜಾತ್ರೆಗಾಗಿ ಫೆ. ೨೫ ರ ಬೆಳಿಗ್ಗೆ ೬ ಗಂಟೆಯಿಂದ ಮಾ.೧ರ ಸಂಜೆ ೭ ಗಂಟೆಯವರೆಗೆ ರವರೆಗೆ ದ್ವಿಚಕ್ರ ವಾಹನ, ತ್ರಿಚಕ್ರ ವಾಹನಗಳು (ಗೂಡ್ಸ್,ಆಟೊ ರಿಕ್ಷಾಗಳು ಸೇರಿದಂತೆ) ತೆರಳುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಜಿಲ್ಲೆ, ಹೊರ ಜಿಲ್ಲೆ, ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ವಾಹನ ದಟ್ಟಣೆ ಹೆಚ್ಚಾಗಲಿದೆ. ಸದರಿ ರಸ್ತೆಯು ಅರಣ್ಮ ಪ್ರದೇಶ ಹಾಗೂ ಕಡಿದಾದ ತಿರುವುಗಳಿಂದ ಕೂಡಿದ್ದು ವಾಹನ ಸಂಚಾರದಲ್ಲಿ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವ ಕಾರಣ ದ್ವಿಚಕ್ರ ವಾಹನ,ತ್ರಿಚಕ್ರ ವಾಹನ(ಆಟೋ ರಿಕ್ಷಾ,ಗೂಡ್ಸ್ ವಾಹನಗಳು ಸೇರಿದಂತೆ) ಗಳು ಜಾತ್ರೆಗಾಗಿ ಮಲೆ ಮಹದೇಶ್ವರ ಬೆಟ್ಟ ತೆರಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…