ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಯುಗಾದಿ ಜಾತ್ರೆಗೆ ಸಜ್ಜಾಗುತ್ತಿದೆ.
ಯುಗಾದಿ ಜಾತ್ರೆಯ ಅಂಗವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ರಥೋತ್ಸವ ನಡೆಯಲಿದ್ದು, ಇಲ್ಲಿಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಭೇಟಿ ನೀಡಲಿದ್ದಾರೆ.
ಇನ್ನು ಯುಗಾದಿ ಜಾತ್ರೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆ ಮೂಲಕವೂ ಜನರು ಬೆಟ್ಟಕ್ಕೆ ಹೋಗುತ್ತಿದ್ದಾರೆ.
ರಥೋತ್ಸವವನ್ನು ನೋಡಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಸಾರ್ವಜನಿಕರು ಬೆಟ್ಟಕ್ಕೆ ಆಗಮಿಸಲಿದ್ದಾರೆ.
ಬೆಟ್ಟಕ್ಕೆ ಬರುವ ಎಲ್ಲಾ ಸಾರ್ವಜನಿಕರಿಗೂ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗುತ್ತದೆ.
ಇನ್ನು ಯುಗಾದಿ ಜಾತ್ರೆಯ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಬರುವ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಪ್ರವೇಶದ ಬಗ್ಗೆ ಜಿಲ್ಲಾಧಿಕಾರಿ ನಿರ್ಧಾರ ಕೈಗೊಳ್ಳಲಿದ್ದಾರೆ.





