ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು
ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಭಕ್ತಾಧಿಗಳು ತೆರಳಲಿದ್ದು, ಫೆಬ್ರವರಿ 8 ರಿಂದ 11ರವರೆಗೆ ಕಾವೇರಿ ನದಿ ನೀರಿನ ಪ್ರಮಾಣ ಕಡಿಮೆ ಮಾಡುವುದು ಸೇರಿದಂತೆ ಭಕ್ತರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಪಂ ಸಿಇಓಗೆ ಪತ್ರದ ಮೂಲಕ ಸೂಚಿಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವಿವಿಧ ತಾಲ್ಲೂಕುಗಳಿಂದ ಲಕ್ಷಾಂತರ ಭಕ್ತಾಧಿಗಳು ಏಳಗಳ್ಳಿಯಿಂದ ಹೊರಟು ಸಂಗಮ, ಬೊಮ್ಮಸಂದ್ರದ ಕಾಲ್ಕಡ ಮಾರ್ಗವಾಗಿ ಬೆಟ್ಟಕ್ಕೆ ಪಾದಯಾತ್ರೆ ಹೋಗುವುದರಿಂದ ಆ ಮಾರ್ಗದಲ್ಲಿ ಹರಿದು ಹೋಗುವ ಕಾವೇರಿ ನದಿಯ ನೀರಿನ ಪ್ರಮಾಣ ಕಡಿಮೆ ಮಾಡುವುದು ಹಾಗೂ ಆ ಮಾರ್ಗದಲ್ಲಿ ಕಾಡು ಪ್ರಾಣಿಗಳಿಂದ ರಕ್ಷಣೆ ಒದಗಿಸಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವಂತೆ ತಿಳಿಸಿದ್ದಾರೆ. ಉತ್ತಮ ಕಾರ್ಯ ನಿರ್ವಹಿಸಿರುವ ಬಗ್ಗೆ ಭಕ್ತಾಧಿಗಳು ಹಾಗೂ ಸಾರ್ವಜನಿಕರಿಂದ ಪ್ರಶಂಸೆಯನ್ನು ಹೊಂದಿರುತ್ತೀರಿ. ಈ ಬಾರಿಯೂ ಕಳೆದ ವರ್ಷ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ಸಹ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಿ ಚರ್ಚಿಸಿ ಯಾವುದೇ ಅವಘಡಗಳಾ ಮರುಕಳಿಸದಂತೆ ಮುಂಜಾಗ್ರತೆ ವಹಿಸಿ ಬೆಟ್ಟಕ್ಕೆ ಪಾದಯಾತ್ರ ಹೋಗುವ ಭಕ್ತಾಧಿಗಳಿಗೆ ರಕ್ಷಣೆ ಒದಗಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಕೆಶಿ ಪತ್ರ ಬರೆದಿದ್ದಾರೆ.





