ಮಲೆಮಹದೇಶ್ವರ ಬೆಟ್ಟ: ಮಾದಪ್ಪನ ಕಾಣಿಕೆ ಹುಂಡಿಯಲ್ಲಿ 2.52 ಕೋಟಿ ರೂ ಸಂಗ್ರಹ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.52 ಕೋಟಿ ರೂ ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು ಎಣಿಕೆ ಕಾರ್ಯವು ಸಂಜೆ 10 ಗಂಟೆಯ ವರೆಗೂ ನಡೆಯಿತು.

ಈ ಬಾರಿ ಅಯ್ಯಪ್ಪ, ಓಂ ಶಕ್ತಿ ಭಕ್ತಾದಿಗಳು ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು ಕಳೆದ 42 ದಿನಗಳ ಅವಧಿಯಲ್ಲಿ 2.ಕೋಟಿ 52 ಲಕ್ಷದ 55 ಸಾವಿರದ 599 ರೂ 72 ಗ್ರಾಂ ಚಿನ್ನ ಹಾಗೂ 3.100 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು, ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ ಎಸ್‌ ಬಿಐ ಬ್ಯಾಂಕ್ ವ್ಯವಸ್ಥಾಪಕರು ,ಮ,ಬೆಟ್ಟ ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

andolanait

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

10 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

12 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

12 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

13 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

13 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

13 hours ago