ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಇತಿಹಾಸದಲ್ಲಿಯೇ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ೩೫ ದಿನಗಳ ಅವಧಿಯಲ್ಲಿ 3.26 ಕೋಟಿ ರೂ. ಸಂಗ್ರಹವಾಗಿದೆ.
ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ರಾತ್ರಿ 10 ಗಂಟೆಯವರೆಗೂ ನಡೆಯಿತು.
ಸರ್ಕಾರಿ ರಜಾ ದಿನ, ಪಾದಯಾತ್ರಿಗಳು, ಯುಗಾದಿ ಅಮಾವಾಸ್ಯೆ ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 3.26.95.339 ನಗದು 47 ಗ್ರಾಂ ಚಿನ್ನ ಹಾಗೂ 2,200 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಇದಲ್ಲದೆ ಈ ಹುಂಡಿಯಿಂದ 59,0002 ವಿದೇಶಿ 11 ನೋಟುಗಳು ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 20 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು,ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ಗುರು ಮಲ್ಲಯ್ಯ, ಪ್ರಾಧಿಕಾರದ ನಾಮನಿರ್ದೇಶಕ ಸದಸ್ಯರುಗಳಾದ ಮಹಾದೇವಪ್ಪ, ಮರಿಸ್ವಾಮಿ, ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಕಲ್ಯಾಣಮ್ಮ, ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು, ಪೊಲೀಸ್ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಕಳೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ 3 ಕೋಟಿ 18 ಲಕ್ಷ ಇದುವರೆಗಿನ ಹುಂಡಿ ಎಣಿಕೆ ದಾಖಲೆಯ ಮೊತ್ತ ಸಂಗ್ರಹವಾಗಿತ್ತು. ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಇನ್ನಿತರ ವಿಶೇಷ ದಿನಗಳಲ್ಲಿ ಹೆಚ್ಚಿನ ಜನರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದ ಇತಿಹಾಸದಲ್ಲಿಯೇ 3.26 ಕೋಟಿ ದಾಖಲೆ ಮೊತ್ತ ಸಂಗ್ರಹವಾಗಿದೆ.
ಎಈ ರಘು ಕಾರ್ಯದರ್ಶಿ, ಶ್ರೀ ಕ್ಷೇತ್ರ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…