ಹನೂರು: ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಬೆಂಕಿ ಹಚ್ಚುತ್ತಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಳ್ಳೇಗಾಲ ತಾಲ್ಲೂಕಿನ ಶಿಲುವೆಪುರ ಗ್ರಾಮದ ಮೊದಲೆ ಮುತ್ತು ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ.
ಘಟನೆಯ ವಿವರ: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಕೊಳ್ಳೇಗಾಲ ಬಫರ್ ವಲಯದ ಸತ್ತೇಗಾಲ ಜಾಗೇರಿ ಶಾಖೆಯ ಚೆಲುವೆಪುರ ಗಸ್ತಿನ ಎಲೆ ಪಾತಿ ಮೇಡು ಅರಣ್ಯ ಪ್ರದೇಶದಲ್ಲಿ ಅತಿಕ್ರಮ ಪ್ರವೇಶ ಮಾಡಿ ಈತ ಅರಣ್ಯಕ್ಕೆ ಬೆಂಕಿ ಹಚ್ಚುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಚಕ್ರಪಾಣಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶಿವರಾಮ್ ಕೆ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕೊಳ್ಳೇಗಾಲ ಬಫರ್ ವಲಯದ ಅರಣ್ಯಾಧಿಕಾರಿ ಭರತ್, ಸತ್ತೇಗಾಲ ಜಾಗೇರಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿ ನಂದೀಶ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.