ಹನೂರು: ಕಾರ್ಯನಿಮಿತ್ತ ಗೊಂಬೆಗಲ್ಲು ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ಆಗಮಿಸುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾರಿ ನಡೆಸಿ ಸಾಯಿಸಿರುವ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ನೆಲ್ಲಿಕತ್ತರಿ ಸಮೀಪ ಜರುಗಿದೆ.
ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಂಬೆಗಲ್ಲು ಗ್ರಾಮದ ಕೇತೇಗೌಡ (75) ಎಂಬುವವರೇ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಘಟನೆ ವಿವರ: ಇಂದು ಬೆಳಿಗ್ಗೆ ಗೊಂಬೆಗಲ್ಲು ಗ್ರಾಮದ ಕೇತೇಗೌಡ ಕಾರ್ಯನಿಮಿತ್ತ ಒಡೆಯರ ಪಾಳ್ಯಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ನೆಲ್ಲಿಕತ್ತರಿ ಸಮೀಪ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ತೀವ್ರ ಗಾಯಗೊಂಡು ಕೇತೇಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಿಆರ್‌ಟಿ ಹುಲಿ ಸಂರಕ್ಷಿತ ವ್ಯಾಪ್ತಿಯ ಡಿಸಿಎಫ್ ಶ್ರೀಪತಿ, ಬೈಲೂರು ವಲಯ ಅರಣ್ಯ ಅಧಿಕಾರಿ ಪ್ರಮೋದ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…