ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ ನಡೆದಿದೆ.
ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ರಾಜು(52) ಮೃತ ವ್ಯಕ್ತಿ. ಈತ ಕೇರಳ ಮೂಲದ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬುಧವಾರ ತಡರಾತ್ರಿ ಮೋಟರ್ ಆನ್ ಮಾಡುವ ಹೋದ ವೇಳೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಮಾಹಿತಿ ಅರಿತ ತೆರಕಣಾಂಬಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಚೆಸ್ಕಾಂ ಅಧಿಕಾರಿಗಳನ್ನು ಬರಮಾಡಿಕೊಂಡು ಜಂಟಿ ಪರಿಶೀಲನೆ ನಡೆಸಿ, ಮೃತ ದೇಹವನ್ನು ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪರಿಹಾರಕ್ಕೆ ಒತ್ತಾಯ:
ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದ ಕೂಲಿ ಕಾರ್ಮಿಕ ಕಡು ಬಡವನಾಗಿದ್ದಾರೆ. ವಿದ್ಯುತ್ ಮೃತಪಟ್ಟಿರುವ ಕಾರಣ ಕುಟುಂಬ ಬೀದಿಗೆ ಬೀಳುವಂತಾಗಿದ್ದು, ಸಂಬಂಧ ಪಟ್ಟವರು ಸೂಕ್ತ ಪರಿಹಾರ ನೀಡಬೇಕೆಂದು ಅಗತಗೌಡನಹಳ್ಳಿ ಗ್ರಾಮಸ್ಥರು ಹಾಗೂ ಕುಟುಂಬದವರು ಒತ್ತಾಯಿಸಿದ್ದಾರೆ.
ವರದಿ : ಮಹೇಂದ್ರ ಹಸಗೂಲಿ





