ಚಾಮರಾಜನಗರ

ಯಳಂದೂರು; ಕರಡಿ ದಾಳಿಗೆ ವ್ಯಕ್ತಿ ಸಾವು

ಯಳಂದೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದಲ್ಲಿ ಕರಡಿ ದಾಳಿ ನಡೆಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಬಿಳಿಗಿರಿರಂಗನ ಬೆಟ್ಟದ ಸೀಗೆಬೆಟ್ಟ ಪೋಡಿನ ನಿವಾಸಿ ಸಿದ್ದೇಗೌಡ (30) ಮೃತಪಟ್ಟ ವ್ಯಕ್ತಿ. ಇವರು ಸೋಮವಾರ ಮಧ್ಯಾಹ್ನ 2 ಗಂಟೆಗೆ ಬಿಆರ್‌ಟಿ ಅರಣ್ಯ ವ್ಯಾಪ್ತಿಯ ನೇರಿಗೇರಿ ಎಂಬ ಸ್ಥಳದಲ್ಲಿ ಕಿರು ಉತ್ಪನ್ನಗಳನ್ನು ಸಂಗ್ರಹಿಸಲು ಗುಂಪಿನೊಂದಿಗೆ ತೆರಳಿದ್ದರು. ಆ ವೇಳೆ ಕರಡಿ ದಾಳಿ ನಡೆಸಿದೆ. ಇವರೊಂದಿಗೆ ತೆರಳಿದ್ದ ಎಲ್ಲರೂ ಇಲ್ಲಿಂದ ಕಾಲ್ಕಿತ್ತರೆ ಸಿದ್ದೇಗೌಡ ಕರಡಿ ಕೈಯಲ್ಲಿ ಸಿಲುಕಿದ್ದು, ಕರಡಿ ಕಚ್ಚಿ ಗಾಯಗೊಳಿಸಿದ್ದರಿಂದ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

2 ವರ್ಷಗಳ ಹಿಂದೆ ಇವರ ಪತ್ನಿ ಮೃತಪಟ್ಟಿದ್ದು, ಇವರಿಗೆ ಎರಡೂವರೆ ವರ್ಷದ ಹೆಣ್ಣು ಮಗುವಿದೆ. ಈ ಸಂಬಂಧ ಅರಣ್ಯ ಇಲಾಖೆಯವರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂಧಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

56 mins ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

1 hour ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

1 hour ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

1 hour ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

1 hour ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

2 hours ago