ಚಾಮರಾಜನಗರ

ವ್ಯಕ್ತಿಯೋರ್ವ ಮಲೆಮಹದೇಶ್ವರ ಸ್ವಾಮಿ ದೇವಾಲಯ ಏರಿ ಆತ್ಮಹತ್ಯೆಗೆ ಯತ್ನ

ಹನೂರು:  ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳವಾದ‌ ಮಲೆಮಹದೇಶ್ವರ ಬೆಟ್ಟದ‌ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಪುರದ ಮೇಲೆ ಏರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನೆಡೆದಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಮೂಲದ ಮೃತ್ಯುಂಜಯ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ.

ಶ್ರೀ ಕ್ಷೇತ್ರದ ಮಾದಪ್ಪ ದೇವಾಲಯದ ಗೋಪುರ ಏರಿದ ಆತನನ್ನು ನೆರೆದಿದ್ದ ಭಕ್ತ ಸಮೂಹ ಕೆಳಗಿಳಿಯುವಂತೆ ಕೇಳಿಕೊಂಡರು ಯಾವುದಕ್ಕೂ ಕಿವಿಗೊಡದೆ ಗೋಪುರದ ಮೇಲೆ  ಮೇಲೆ ಏರುತಿದ್ದ.‌ಈ ಬಗ್ಗೆ ಮಾಹಿತಿ ತಿಳಿದ ಮಹದೇಶ್ವರಬೆಟ್ಟ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ನೆರೆದಿದ್ದ ಭಕ್ತರ ಸಹಕಾರದೊಂದಿಗೆ ಆತನನ್ನು ಮನವೊಲಿಸಿ ಕೆಳಗಿಸುವಲ್ಲಿ
ಯಶಸ್ವಿಯಾಗಿದ್ದಾರೆ.

ಈ ವೇಳೆ  ವ್ಯಕ್ತಿ ಪಂಚೆ ಬಿಟ್ಟರೆ ಮೈಮೇಲೆ ಮತ್ಯಾವ ಬಟ್ಟೆ ಇಲ್ಲದೆ ಮಾನಸಿಕ ಅಸ್ವಸ್ಥನಂತೆ ವರ್ತಿಸಿದ್ದ ಎನ್ನಲಾಗಿದೆ. ನಂತರ ಪೊಲೀಸರೇ ಬಟ್ಟೆ ಕೊಡಿಸಿ, ಬಸ್ ಚಾರ್ಜ್ ಗೆ ಹಣ ನೀಡಿ ಗ್ರಾಮಕ್ಕೆ ವಾಪಸ್ ಕಳಿಸಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಾನಸಿಕ ಅಸ್ವಸ್ಥ ವ್ಯಕ್ತಿಯಾಗಲಿ, ಜೀವನದಲ್ಲಿ ಜಿಗಪ್ಸೆ ಹೊಂದಿದವರಾಗಲಿ, ಮಲೆ ಮಹದೇಶ್ವರ ಬೆಟ್ಟದ ರಾಜಗೋಪುರ ಹಾಗೂ ಇನ್ನಿತರ ಗೋಪುರಗಳಿಗೆ ಹೇರಿ ಹುಚ್ಛಾಟ ಮೆರೆಯಬಾರದು.ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳು ತಮ್ಮ ಕಷ್ಟ ಕಾರ್ಪಣ್ಯಗಳನ್ನು ಈಡೇರಿಸುವಂತೆ ಕೋರಿಕೆ ಮಾಡಲು ಬರುವುದು ವಾಡಿಕೆ ಅದರಂತೆ ಮಾದಪ್ಪನ ಬೆಟ್ಟಕ್ಕೆ ಕೆಟ್ಟ ಹೆಸರು ತರಬಾರದು ಎಂದು ಪೊನ್ನಾಚಿ ಸ್ನೇಹಜೀವಿ ರಾಜು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

3 hours ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

3 hours ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

3 hours ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

3 hours ago

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

15 hours ago