Student Death
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ
ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೆಂಡರವಾಡಿ ತಾವರೆ ಕೆರೆಯಲ್ಲಿ ಮಂಗಳವಾರ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಾಗನೂರು ಗ್ರಾಮದ ಮಲ್ಲಿಕಾರ್ಜುನ (39)
ಮೃತಪಟ್ಟವರು.
ಬೆಳಿಗ್ಗೆ 8ಗಂಟೆಯಲ್ಲಿ ಬೈಕು, ಚಪ್ಪಲಿಯನ್ನು ದಡದಲ್ಲಿ ಬಿಟ್ಟು ಕೆರೆಗೆ ಹಾರಿದ್ದು ಈ ವಿಚಾರ ಪೊಲೀಸರಿಗೆ ಗೊತ್ತಾಗಿ ಶವವನ್ನು ಮೇಲಕ್ಕೆ ಎತ್ತಿ ಮರಣೋತ್ತರ ಪರೀಕ್ಷೆ ನಂತರ ಕುಟುಂಬ ವರ್ಗದವರಿಗೆ ಹಸ್ತಾಂತರ ಮಾಡಿದರು.
ಮೃತರು ವಿವಾಹಿತರಾಗಿದ್ದು ಮದ್ಯ ವ್ಯಸನಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೈಕ್ ನೋಂದಣಿ ಸಂಖ್ಯೆಯಿಂದ ಇವರು ಮಂಡ್ಯ ಜಿಲ್ಲೆಯವರು ಎಂಬುದು ಕೂಡಲೇ ಗೊತ್ತಾಗಿದೆ.
ಈ ಸಂಬಂಧ ನಗರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನಾಸ್ಥಳಕ್ಕೆ ಇನ್ಸ್ ಪೆಕ್ಟರ್ ಶೇಷಾದ್ರಿ,ಅಪರಾಧ ವಿಭಾಗದ ಎಸ್ಸೈ ಸೀಗಯ್ಯ, ಎಎಸ್ಸೈ ಚಂದ್ರಶೇಖರ ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…