ಚಾಮರಾಜನಗರ

ಹನೂರು: ಗಾಂಜಾ ಬಿಸಾಡಿ ಪರಾರಿಯಾದ ವ್ಯಕ್ತಿ

ಹನೂರು: ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಾಹನ ಸವಾರರನ್ನು ಪೊಲೀಸರು ತಡೆದು ವಿಚಾರಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಗಾಂಜಾ ಬಿಸಾಡಿ ಪರಾರಿಯಾಗಿರುವ ಘಟನೆ ಜರುಗಿದೆ.

ಗಾಂಜಾ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಣಪತಿ ಪ್ರತಿಷ್ಠಾಪನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಹನೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್ ಹಾಗೂ ಸಿಬ್ಬಂದಿ ವರ್ಗದವರು ಬಂಡಳ್ಳಿ ರಸ್ತೆಯಲ್ಲಿ ಗಸ್ತು ಮಾಡುತ್ತಿದ್ದಾಗ ಬಂಡಳ್ಳಿ ರಸ್ತೆಯಿಂದ ಹನೂರು ಪಟ್ಟಣಕ್ಕೆ ಆಗಮಿಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದಿದ್ದಾರೆ.

ಈ ವೇಳೆ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್ ನೀನು ಯಾವ ಊರು, ನಿನ್ನ ಹೆಸರೇನು ಎಂದು ಕೇಳುತ್ತಿದ್ದಾಗ ಕುಮಾರ್ ಎಂದು ತಿಳಿಸಿ ಪರಾರಿಯಾಗಿದ್ದಾನೆ. ದ್ವಿಚಕ್ರ ವಾಹನದಲ್ಲಿ ಬಿಳಿ ಬಣ್ಣದ ಚೀಲವಿದ್ದು ಇದನ್ನು ಪರಿಶೀಲನೆ ಮಾಡಿದಾಗ 1.128 ಕೆಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಾಗಣೆ ಮಾಡಲು ಬಳಸಿದ ದ್ವಿಚಕ್ರ ವಾಹನ ಹಾಗೂ ಒಣಗಾಂಜಾವನ್ನು ವಶಕ್ಕೆ ಪಡೆದುಕೊಂಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ, ಕೊಳ್ಳೇಗಾಲ ಡಿಎಸ್ಪಿ ಧರ್ಮೇಂದ್ರ, ಇನ್ಸ್‌ಪೆಕ್ಟರ್ ಆನಂದ್ ಮೂರ್ತಿ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್ ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

14 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

15 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

16 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

22 hours ago