Mysore
20
clear sky

Social Media

ಶುಕ್ರವಾರ, 16 ಜನವರಿ 2026
Light
Dark

ಗಾಂಜಾ ಮಾರಾಟ : ಓರ್ವ ಬಂಧನ

arrest

ಹನೂರು : ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಹನೂರು ತಾಲೂಕಿನ ಹಾವಿನ ಮೂಲೆ (ಯಜಮಾನ್ ದೊಡ್ಡಿ) ಗ್ರಾಮದ ಶಿವಣ್ಣ (34 )ಬಂಧಿತ ಆರೋಪಿಯಾಗಿದ್ದಾನೆ.

ಘಟನೆ ವಿವರ
ಹನೂರು ತಾಲೂಕಿನ ಪಿ.ಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾವಿನ ಮೂಲೆ ಗ್ರಾಮದ ನಿವಾಸಿ ಶಿವಣ್ಣ ಎಂಬಾತ ಹನೂರು ಪಟ್ಟಣ ವ್ಯಾಪ್ತಿಯ ಲೊಕ್ಕನಹಳ್ಳಿ ಮಾರ್ಗದ ಸೇತುವೆ ಬಳಿ ಅಕ್ರಮ ಗಾಂಜಾ ಶೇಖರಣೆ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಕೊಳ್ಳೇಗಾಲ ಡಿಎಸ್ಪಿ ಧರ್ಮೇಂದ್ರ ಹನೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆನಂದ್ ಮೂರ್ತಿ ಮಾರ್ಗದರ್ಶನದಲ್ಲಿ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ರವಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದಾಗ ಆತನ ಬಳಿ 260 ಗ್ರಾಂ ಗಾಂಜಾ ಇರುವುದು ಬೆಳಕಿಗೆ ಬಂದಿದೆ. ನಂತರ ಆತನನ್ನು ಬಂಧಿಸಿ ಪ್ರಕರಣ ದಾಖಲು ಮಾಡಲಾಗಿದೆ.

ದಾಳಿಯಲ್ಲಿ ಮುಖ್ಯಪೇದೆ ಚಂದ್ರು ಡಿವೈಎಸ್ಪಿ ಅಪರಾಧ ಪತ್ತೆದಾಳದ ಮುಖ್ಯಪೇದೆ ರವಿಕುಮಾರ್, ಪೇದೆಗಳಾದ ಬಿಳಿ ಗೌಡ ಸುನೀಲ್ ಪಾಲ್ಗೊಂಡಿದ್ದರು.

Tags:
error: Content is protected !!