KRS
ಕೊಳ್ಳೇಗಾಲ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದ, ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಕಾವೇರಿ ನದಿಯ ದಡದಲ್ಲಿರುವ ಗ್ರಾಮಗಳಾದ ಮುಳ್ಳೂರು, ದಾಸನಪುರ, ಹಳೇ ಅಣಗಳ್ಳಿ, ಹಳೇ ಹಂಪಾಪುರ, ಯಡಕುರಿಯಾ ಗ್ರಾಮಸ್ಥರು ಎಚ್ಚರಿಕೆ ವಹಿಸಬೇಕಾಗಿ ಸೂಚನೆ ನೀಡಲಾಗಿದೆ. ನಿಮ್ಮ ನಿಮ್ಮ ಜಾನುವಾರು ಹಾಗೂ ಆಸ್ತಿಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಗ್ರಾಮಸ್ಥರಿಗೆ ತಹಶಿಲ್ದಾರ್ ಬಸವರಾಜು ಸೂಚನೆ ನೀಡಿದ್ದಾರೆ.
ಇಂದು ಗ್ರಾಮಗಳಿಗೆ ಭೇಟಿ ನೀಡಿದ ಅವರು, ಪರಿಶೀಲನೆ ನಡೆಸಿ ಕೆಆರ್‌ಎಸ್ ಜಲಾಶಯದಿಂದ ಇನ್ನೂ ಹೆಚ್ಚಿನ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.
ಮತ್ತಷ್ಟು ನೀರು ಹೆಚ್ಚಾದರೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡುವ ಸಂಭವವಿರುವುದರಿಂದ ಗ್ರಾಮಸ್ಥರು ಅಧಿಕಾರಿಗಳ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…