ಚಾಮರಾಜನಗರ

ಮೌನಿ ಅಮಾವಾಸ್ಯೆ : ಮ.ಬೆಟ್ಟದಲ್ಲಿ ಜನಸಾಗರ, ಒಂದೇ ದಿನ ಲಕ್ಷಕ್ಕೂ ಹೆಚ್ಚು ಜನರ ಭೇಟಿ

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಮೌನಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಜರುಗಿದವು.

ಅಮಾವಾಸ್ಯೆ ಪ್ರಯುಕ್ತ ಭಾನುವಾರ ಮುಂಜಾನೆಯಿಂದಲೇ ಮಲೆ ಮಹದೇಶ್ವರಸ್ವಾಮಿ ಮೂರ್ತಿಗೆ ಎಳನೀರಿನ ಅಭಿಷೇಕ, ಹಾಲು, ಪಂಚಾಮೃತ ಅಭಿಷೇಕ ಪೂಜೆ ನೆರವೇರಿತು. ನೈವೇದ್ಯ ಅರ್ಪಿಸಿದ ಬಳಿಕ ಮಹಾ ಮಂಗಳಾರತಿ ಮಾಡಲಾಯಿತು.

ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರಕ್ಕೆ ವಿವಿಧೆಡೆಯಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸಿ ಮಹದೇಶ್ವರನ ದರ್ಶನ ಪಡೆದರು. ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಬಸವ ವಾಹನ, ಹುಲಿ ವಾಹನ ರುದ್ರಾಕ್ಷಿ ಮಂಟಪ ಸೇವೆಗಳನ್ನು ಮಾಡುವ ಮೂಲಕ ತಮ್ಮ ಹರಕೆಯನ್ನು ಸಲ್ಲಿಸಿದರು.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ಜನರಿಗೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಽಕಾರದ ವತಿಯಿಂದ ಕುಡಿಯುವ ನೀರು, ದಾಸೋಹ, ನೆರಳಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ಅಮಾವಾಸ್ಯೆ ಪ್ರಯುಕ್ತ ಗರ್ಭಗುಡಿ ಹಾಗೂ ದೇಗುಲದ ಒಳಾಂಗಣವನ್ನು ಒಳಾಂಗಣವನ್ನು ವಿವಿಧ ಪುಷ್ಪಗಳಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು.

1.20 ಲಕ್ಷ ಲಾಡು ಮಾರಾಟ:
ಮ.ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದುದ್ದರಿಂದ 1.5 ಲಕ್ಷ ಲಾಡುಗಳನ್ನು ಸಂಗ್ರಹಿಸಲಾಗಿತ್ತು. ಒಂದು ಲಕ್ಷಕ್ಕೂ ಹೆಚ್ಚು ಲಾಡುಗಳು ಮಾರಾಟವಾಗಿವೆ ಎಂದು ತಿಳಿದುಬಂದಿದೆ. ಭಾನುವಾರ ಒಂದೇ ದಿನ ಸುಮಾರು 1.50 ಲಕ್ಷ ಹೆಚ್ಚು ಜನರು ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕೆಟ್ಟುನಿಂತ ಬಸ್‌ಗಳು
ಸಮರ್ಪಕ ನಿರ್ವಹಣೆಯಿಲ್ಲದ 3 ಬಸ್‌ಗಳು ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗಿನ ಮಾರ್ಗದಲ್ಲಿ ಕೆಟ್ಟುನಿಂತಿದ್ದವು. ಇದರಿಂದ ಪ್ರಯಾಣಿಕರು ಪರದಾಡಿದರು. ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಆನೆ ತಲೆದಿಂಬದಿಂದಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಹಾಗೂ ಭಕ್ತಾದಿಗಳು ಎರಡು ಗಂಟೆಗಳಿಗೂ ಹೆಚ್ಚು ಕಾಲ ರಸ್ತೆಯಲ್ಲಿ ಕುಳಿತು ಕಾಲ ಕಳೆಯುವಂತಾಯಿತು.

ವಿಶೇಷ ಪ್ರವೇಶ ದ್ವಾರ ಬಂದ್
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ವಿಐಪಿಗಳು ಹಾಗೂ ಶಿಫಾರಸು ಪತ್ರದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದುದರಿಂದ ನೂಕು ನೂಗ್ಗಲು ಉಂಟಾಗಿ ವಿಶೇಷ ಪ್ರವೇಶ ದ್ವಾರ ಗೇಟ್ ನಂಬರ್ ನಾಲ್ಕನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.

500 ರೂ.ಟಿಕೆಟ್‌ಗೂ ಹೆಚ್ಚಿನ ಕ್ಯೂ
ಭಾನುವಾರ ಅಮಾವಾಸ್ಯೆ ಇದ್ದಿದ್ದರಿಂದ ರಾಜ್ಯದ ಮೂಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಹೀಗಾಗಿ ಭಕ್ತಾದಿಗಳು 500 ಟಿಕೆಟ್ ಪಡೆದು ದರ್ಶನ ಪಡೆಯಲು ಮುಂದಾಗಿದ್ದರು. ಆದರೆ ಈ ಟಿಕೆಟ್ ಪಡೆಯಲು ಕೂಡ ಉದ್ದನೆಯ ಸಾಲಿನಲ್ಲಿ ನಿಲ್ಲಬೇಕಾಗಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

19 mins ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

28 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

29 mins ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

1 hour ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

1 hour ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

2 hours ago