ಚಾಮರಾಜನಗರ : ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ಬುಧವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ. ಅಂದು ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತವರ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





