ಹನೂರು : ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದಿಂದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಯಾವುದೇ ಪ್ರಯೋಜನವಾಗಿಲ್ಲ ಈ ನಿಟ್ಟಿನಲ್ಲಿ ಬಿಜೆಪಿಯನ್ನು ತೊಲಗಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕೆಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ತಾಲೂಕಿನ ವಿ ಎಸ್ ದೊಡ್ಡಿ ಗ್ರಾಮದ ಮೈರಾಡ ಸಂಸ್ಥೆಯ ಆವರಣದಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರುಗಳ ಸಭೆಯಲ್ಲಿ ಅವರು ಮಾತನಾಡಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವ ಮುನ್ನ ದೇಶದ ಜನರಿಗೆ ತನ್ನ ಪ್ರಣಾಳಿಕೆಯಲ್ಲಿ ನೂರಾರು ಭರವಸೆಗಳನ್ನು ಕೊಟ್ಟಿದ್ದರು. ಆದರೆ ಇದುವರೆಗೂ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ವಿಫಲವಾಗಿದೆ. ದಿನನಿತ್ಯದ ಆಹಾರ ಪದಾರ್ಥಗಳು ಪೆಟ್ರೋಲ್ ಡೀಸೆಲ್,ರಾಸಾಯನಿಕ ಗೊಬ್ಬರಗಳ ಬೆಲೆ ಗಗನಕ್ಕೇರಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರು ಬೆಳೆಯುವ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಪ್ರತಿಭಟನೆ ನಡೆಸುವಂತಹ ಪರಿಸ್ಥಿತಿ ಬಂದಿದೆ. ಈ ಹಿಂದೆ ಇದ್ದ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹತ್ತಾರು ಜನಪರ ಯೋಜನೆಗಳನ್ನು ನೀಡಲಾಗಿತ್ತು. ಈ ವೇಳೆ ನೀಡಿದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಿಂದ ಲಕ್ಷಾಂತರ ಜನರು ಉದ್ಯೋಗ ಕಂಡುಕೊಂಡಿದ್ದಾರೆ. ಈ ವೇಳೆ ಗ್ಯಾಸ್ ಪೆಟ್ರೋಲ್ ಡೀಸೆಲ್ ಬೆಲೆ ಹಾಗಾಗಿ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ತರುವಲ್ಲಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕೆಂದು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಬೆರಡೆಯಿಂದ ಹನೂರು ಕ್ಷೇತ್ರಕ್ಕೆ ಬಂದಿರುವ ಕಿಡಿಗೇಡಿಗಳು ಹಣದ ಆಮಿಷ ತೋರಿಸಿ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಹಣ ಆಮಿಷಗಳಿಗೆ ಒಳಗಾಗಬಾರದು ಎಂದು ತಿಳಿಸಿದರು.
ಚಾಮುಲ್ ನಿರ್ದೇಶಕ ನಂಜುಂಡಸ್ವಾಮಿ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಮಾಡುತ್ತಿಲ್ಲ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ 40% ಕಮಿಷನ್ ನೀಡಬೇಕಿದೆ ಇದೊಂದು ಭ್ರಷ್ಟ ಸರ್ಕಾರ, ಎಲ್ಲಾ ಸಮೀಕ್ಷೆಗಳಲ್ಲಿಯೂ ಕಾಂಗ್ರೆಸ್ ಗೆ ಹೆಚ್ಚಿನ ಒಲವು ಇರುವುದರಿಂದ ಪಕ್ಷದ ಕಾರ್ಯಕರ್ತರು ಶಾಸಕ ಆರ್ ನರೇಂದ್ರ ರವರನ್ನು ಬೆಂಬಲಿಸಿ ನಾಲ್ಕನೇ ಬಾರಿಗೆ ಆಯ್ಕೆ ಮಾಡುವ ಮೂಲಕ ಸಚಿವರನ್ನಾಗಿ ಮಾಡೋಣ ಎಂದು ತಿಳಿಸಿದರು.
ಈ ವೇಳೆ ಕೊಳ್ಳೇಗಾಲ ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕ ಮಾದ ನಾಯ್ಕ, ನಾಯಕ,ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜ್, ಮುಖಂಡರುಗಳಾದ ಉದ್ದನೂರು ಸಿದ್ದರಾಜು, ಪಿ ಜಿ ಪಾಳ್ಯ ಗುರುಮಲ್ಲಪ್ಪ, ಲೋಕನಹಳ್ಳಿ ಜಗದೀಶ್, ಪುಟವೀರ್ ನಾಯ್ಕ, ನಾಗೇಂದ್ರ, ಇಕಡಳ್ಳಿ ಕೆಂಪರಾಜು,ವಿನಯ್ ನಂಜುಂಡ ಶೆಟ್ಟಿ, ಅಂಕ ರಾಜು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಜರಿದ್ದರು.