Mysore
15
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

12 ರಂದು 4 ತಾಲ್ಲೂಕುಗಳಲ್ಲಿ ಮೆಗಾ ಲೋಕ ಅದಾಲತ್

ಸುದ್ದಿಗೋಷ್ಠಿಯಲ್ಲಿ ಪ್ರಾಧಿಕಾರ ಅಧ್ಯಕ್ಷರಾದ ಬಿ.ಎಸ್.ಭಾರತಿ ವಿವರಣೆ

ಚಾಮರಾಜನಗರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನ.೧೨ ರಂದು ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.

ಅಂದು ಬೆಳಗ್ಗೆ ೧೦.೩೦ ಗಂಟೆಗೆ ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲದ ನ್ಯಾಯಾಲಯಗಳಲ್ಲಿ ಬೈಠಕ್‌ಗಳನ್ನು ಏರ್ಪಡಿಸಲಾಗುವುದು. ಅಲ್ಲದೆ ಸಂಧಾನಕಾರರನ್ನು ನೇಮಿಸಿ ಅದಾಲತ್ ನಡೆಸಲಾಗುತ್ತದೆ ಎಂದು ಮಂಗಳವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಈ ಹಿಂದೆ ನಡೆದ ಲೋಕ ಅದಾಲತ್‌ನಲ್ಲಿ ವಕೀಲರ, ಕಕ್ಷಿದಾರರ, ಪೊಲೀಸರ, ವಿಮಾ ಕಂಪನಿಗಳ ಮತ್ತು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದು ೯೨೯೩ ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು. ಅ.೧೨ ರಂದು ನಡೆಯುವ ಅದಾಲತ್‌ನಲ್ಲಿ ೧೦ ’ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.

ಅದಾಲತ್‌ಗೆ ಸಂಬAಧಪಟ್ಟ ವಕೀಲರು, ಕಕ್ಷಿದಾರರು ತಮ್ಮ ಸಹಕಾರವನ್ನು ನೀಡಿದ್ದಲ್ಲಿ ಸಂಧಾನಕಾರರು ನೀಡುವ ಸಲಹೆಗಳನ್ನು ಆಲಿಸಿ, ಪರಸ್ಪರ ಒಪ್ಪಿಗೆಯಾದಲ್ಲಿ ಪ್ರಕರಣವನ್ನು ಲೋಕ ಅದಾಲತ್‌ನಲ್ಲಿ ಬಗೆಹರಿಸಿಕೊಳ್ಳಬಹುದು. ಇದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗುತ್ತದೆ ಎಂದು ತಿಳಿಸಿದರು.

ಅದಾಲತ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳನ್ನು ಹೊರತುಪಡಿ ಸಿವಿಲ್ ಪ್ರಕರಣಗಳಾದ ದಾಂಪತ್ಯ ಹಕ್ಕುಗಳ ಪುನರ್ ಸ್ಥಾಪನೆ, ಜೀವನಾಂಶ, ಮಕ್ಕಳ ಸಂರಕ್ಷಣೆ, ವಾಹನ ಅಪಘಾತ, ಕೈಗಾರಿಕಾ ವಿವಾದ ಕಾಯ್ದೆ ಸಂಬAಧ ಹಾಗೂ ಇತರೆ ಎಲ್ಲಾ ಸ್ವರೂಪದ ಪ್ರಕರಣಗಳು ಮತ್ತು ರಾಜಿ ಯೋಗ್ಯ ಕ್ರಿಮಿನಲ್ ಪ್ರಕರಣಗಳನ್ನು ಪರಿಹರಿಸಿಕೊಳ್ಳಬಹುದು ಎಂದು ವಿವರಿಸಿದರು.

ಚೆಕ್ ಅಮಾನ್ಯ, ಕಾರ್ಮಿಕ ಕಾಯ್ದೆ ಸಂಬAಧದ ಕೇಸ್, ವಿದ್ಯುತ್ ಕಳವು, ಅಕ್ರಮ ಕಲ್ಲು, ಮರಳು ಸಾಗಾಣಿಕೆಗೆ ಸಂಬAಧಪಟ್ಟ ಅಪರಾಧಗಳು, ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ರಾಜೀ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!