ಚಾಮರಾಜನಗರ

ಕಗ್ಗಲಿಗುಂದಿ, ಜೀರಿಗೆಗದ್ದೆ ಗ್ರಾಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್‌ ಭೇಟಿ, ಪರಿಶೀಲನೆ

ಹನೂರು: ತಾಲೂಕಿನ ಬುಡಕಟ್ಟು ಜನಾಂಗದವರು ವಾಸಿಸುವ ಕಗ್ಗಲಿಗುಂದಿ ಹಾಗೂ ಜೀರಿಗೆಗದ್ದೆ ಗ್ರಾಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಕುಂದಿ ಗ್ರಾಮಕ್ಕೆ ಭೇಟಿ ನೀಡಿದ ಅವರು ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿದೆಯೇ, ಪಿಂಚಣಿ ಸರಿಯಾಗಿ ಬರುತ್ತಿದೆಯೇ ಹಾಗೂ ಯಾವುದಾದರೂ ಕಾನೂನು ವ್ಯಾಜ್ಯಗಳು ನಡೆಯುತ್ತಿದೆ ಎಂದು ಗ್ರಾಮಸ್ಥರನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನಿವಾಸಿಗಳು ಗ್ರಾಮಕ್ಕೆ ಸಮರ್ಪಕ ಮೂಲಭೂತ ಸೌಲಭ್ಯಗಳು ಸಿಗುತ್ತಿದೆ, ಗ್ರಾಮದ ಇಬ್ಬರು ವಯೋವೃದ್ಧರಿಗೆ ಪಿಂಚಣಿ ಬರುತ್ತಿಲ್ಲ ಎಂದು ತಿಳಿಸಿದ್ದಾರೆ.

ಸ್ಥಳದಲ್ಲಿಯೇ ಇದ್ದ ಕಂದಾಯ ನಿರೀಕ್ಷಕರಾದ ಮಹದೇವಸ್ವಾಮಿ ಮಾತನಾಡಿ ಎನ್‌ಸಿಪಿ ಮ್ಯಾಪಿಂಗ್ ಆಗದೆ ಇರುವುದರಿಂದ ಸಮಸ್ಯೆಯಾಗಿದೆ, ಇನ್ನೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.

ಇನ್ನು ಕಗ್ಗಲಿಗುಂದಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಇಲ್ಲದೆ ಇರುವುದರಿಂದ ದೊಡ್ಡ ಮಾಲಾಪುರ ಗ್ರಾಮಕ್ಕೆ ತೆರಳಬೇಕಾಗಿದೆ ಇದರಿಂದ ಮಕ್ಕಳು ಸರಿಯಾಗಿ ಅಂಗನವಾಡಿಗೆ ತೆರಳುತ್ತಿಲ್ಲ ಇದರಿಂದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ನಮ್ಮ ಗ್ರಾಮದಲ್ಲಿ ಅಂಗನವಾಡಿ ನಿರ್ಮಾಣ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರವೇ ಅಂಗನವಾಡಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವುದಾಗಿ ಈಶ್ವರ್ ತಿಳಿಸಿದರು.

ಸಮೀಪದ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು ಶಾಲೆಯಲ್ಲಿನ ಮೂಲಭೂತ ಸೌಲಭ್ಯಗಳ ಬಗ್ಗೆ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ ಶಿಕ್ಷಕರಾದ ಲೋಕೇಶ್ ರವರು ಶಾಲೆಗೆ ಎಲ್ಲ ರೀತಿಯ ವ್ಯವಸ್ಥೆ ಇದೆ . ಆದರೆ ಕಾಂಪೌಂಡ್ ವ್ಯವಸ್ಥೆ ಇಲ್ಲ, ಕಳೆದ ಒಂದು ವರ್ಷಗಳ ಹಿಂದೆ ಚಿರತೆ ದಾಳಿಗೆ ವಿದ್ಯಾರ್ಥಿನಿ ಮೃತಪಟ್ಟಿದ್ದ ವಿಚಾರವನ್ನು ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಿ ವರದಿ ನೀಡಲಾಗುವುದು ಎಂದರು.

ಜೀರಿಗೆ ಗದ್ದೆ ಬುಡಕಟ್ಟು ಆಶ್ರಮ ಶಾಲೆಗೆ ಭೇಟಿ ನೀಡಿದ ನ್ಯಾಯಾಧೀಶರು ಮಕ್ಕಳಿಗೆ ಸಮರ್ಪಕವಾಗಿ ಸರ್ಕಾರದ ಮೆನುವಿನಂತೆ ಊಟ ತಿಂಡಿ ಪೂರೈಕೆ ಮಾಡಲಾಗುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ ಈ ವೇಳೆ ವಿದ್ಯಾರ್ಥಿಗಳು ಸರಿಯಾಗಿ ಊಟ ತಿಂಡಿ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟಕ್ಕೆ ತಯಾರಿಸಿದ್ದ ಅನ್ನ ಬೇಳೆ ಸಾಂಬಾರ್ ಊಟ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಹಾವಿನ ಮೂಲೆ ಹಾಗೂ ಜೀರಿಗೆ ಗದ್ದೆ ಗ್ರಾಮದ ಎರಡು ಅಂಗನವಾಡಿ ಕೇಂದ್ರಗಳಿಗೆ ಒಬ್ಬರೇ ಶಿಕ್ಷಕರು ಇರುವುದರಿಂದ ತೊಂದರೆ ಆಗುತ್ತಿದೆ. ಆದ್ದರಿಂದ ಎರಡು ಅಂಗನವಾಡಿ ಕೇಂದ್ರಗಳಿಗೆ ಪ್ರತ್ಯೇಕ ಶಿಕ್ಷಕರನ್ನು ನೇಮಕ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದರು. ಈ ಸಂಬಂಧ ತಾಲೂಕು ಪರಿಶಿಷ್ಟ ಪಂಗಡ ಕಲ್ಯಾಣ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.

ಈ ವೇಳೆ ತಹಸಿಲ್ದಾರ್ ವೈ ಕೆ ಗುರುಪ್ರಸಾದ್, ಲೊಕ್ಕನಹಳ್ಳಿ ಹೋಬಳಿ ಕಂದಾಯ ನಿರೀಕ್ಷಕ ಮಹದೇವಸ್ವಾಮಿ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್‌ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

6 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

7 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

8 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

8 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

8 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

8 hours ago