Mysore
32
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ಬಿಆರ್‌ಟಿ ಅರಣ್ಯ ಮಧ್ಯೆ ಮಿನಿ ಬಸ್‌ ಪಲ್ಟಿ: ಹಲವರಿಗೆ ಗಾಯ

Bus Accident

ಹನೂರು: ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ದೇವರ ದರ್ಶನ ಮಾಡಿ ವಾಪಸ್ ಆಗುತ್ತಿದ್ದ ವೇಳೆ ಮಿನಿ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ.

ಬಿಳಿಗಿರಿರಂಗನ ಬೆಟ್ಟದ ಪುರಾಣಿ ಪೋಡಿಗೆ ಹೋಗುವ ಅಡ್ಡದಾರಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ.

ಬಸ್ಸಿನಲ್ಲಿ ಮಹಿಳೆಯರು, ಮಕ್ಕಳು ಹಾಗೂ ವಯಸ್ಕರು ಇದ್ದು, ಕೆಲವರಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಯಳಂದೂರು ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳು ತುಮಕೂರು ಮೂಲದವರು ಎಂದು ತಿಳಿದುಬಂದಿದೆ.

Tags:
error: Content is protected !!