ಚಾಮರಾಜನಗರ

ಗಣಿಗಾರಿಕೆ | ತೆರಕಣಾಂಬಿ ಭಾಗದಲ್ಲಿ ನಿಯಮಿ ಮೀರಿ ಸಂಚರಿಸುತ್ತಿರುವ ಟಿಪ್ಪರ್‌ಗಳು ; ಕ್ರಮಕ್ಕೆ ಆಗ್ರಹ

ಗುಂಡ್ಲುಪೇಟೆ : ತಾಲ್ಲೂಕಿನ ತೆರಕಣಾಂಬಿ ಸುತ್ತಮುತ್ತ ಎಗ್ಗಿಲ್ಲದೆ ಗಣಿಗಾರಿಕೆ ನಡೆಯುತ್ತಿದ್ದು ಮಧ್ಯರಾತ್ರಿಯಲ್ಲೂ ಬಿಳಿಕಲ್ಲು ತುಂಬಿಕೊಂಡು ಟಿಪ್ಪರ್‌ಗಳು ಸಂಚರಿಸುತ್ತಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಮಧ್ಯರಾತ್ರಿಯಲ್ಲೂ ಟಿಪ್ಪರ್‌ಗಳು ಕಲ್ಲುಗಳನ್ನು ತುಂಬಿಕೊಂಡು ಸಂಚರಿಸುತ್ತಿದ್ದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಆರ್ ಟಿಒ, ಪೊಲೀಸ್ ಇಲಾಖೆಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇದನ್ನು ಓದಿ: ಫಿಟ್‌ ಇಂಡಿಯಾ ಮೂಲಕ ಆರೋಗ್ಯ ಜಾಗೃತಿ : ಸಂಸದ ಯದುವೀರ್‌

ರಸ್ತೆಯಲ್ಲಿ ಟಿಪ್ಪರ್‌ಗಳ ಆರ್ಭಟದಿಂದ ಅಪಘಾತಗಳೂ ನಡೆಯುತ್ತಿವೆ. ಬೆಳಿಗ್ಗೆ ಸಂದರ್ಭದಲ್ಲಿ ಟಿಪ್ಪರ್‌ಗಳು ಅತಿ ವೇಗ ಮತ್ತು ಅಧಿಕ ಭಾರ ಹೊತ್ತು ಸಾಗುವುದರಿಂದ ಸಾಕಷ್ಟು ಅಪಘಾತ ಪ್ರಕರಣಗಳು ನಡೆದಿವೆ. ರಾತ್ರಿಯಲ್ಲಿ ನಿಯಮ ಮೀರಿ ಟಿಪ್ಪರ್‌ಗಳು ಸಂಚರಿಸುತ್ತಿದ್ದು, ಅಪಾಯವಾಗುವ ಮುನ್ನ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಬೇಕು. ಇಲ್ಲವೇ ಸಾರ್ವಜನಿಕರು ಬೀದಿಗೆ ಇಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ತೆರಕಣಾಂಬಿ ಭಾಗದಲ್ಲಿ ರಾತ್ರಿ ೧೧ ಗಂಟೆಯಾದರೂ ಬಿಳಿ ಕಲ್ಲು ತುಂಬಿಕೊಂಡು ಟಿಪ್ಪರ್‌ಗಳು ಸಂಚರಿಸುತ್ತಿವೆ. ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ಎದುರಾಗಿದೆ. ರಾಜಕೀಯ ಶಕ್ತಿ ಬಳಸಿಕೊಂಡು ಎಗ್ಗಿಲ್ಲದೆ ಗಣಿಗಾರಿಕೆ ನಡೆಯುತ್ತಿದ್ದು, ಗಣಿ ಮತ್ತು ಭೂವಿಜ್ಞಾನ ಇಲಾಖೆಯವರು, ಆರ್‌ಟಿಒ ಅಧಿಕಾರಿಗಳು, ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಮಂಜು ಆಗ್ರಹಿಸಿದ್ದಾರೆ.

ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ ತೆರಕಣಾಂಬಿ ಠಾಣೆ ಸಬ್‌ಇನ್ಸ್‌ಪೆಕ್ಟರ್‌ ಮಹೇಶ್‌, ರಾತ್ರಿ ಸಮಯ ಗಣಿಗಾರಿಕೆ ನಡೆಯುತ್ತಿದ್ದರೆ ಆರೋಪ ಮಾಡಿದವರು ಗಣಿ ಇಲಾಖೆಗೆ ದೂರು ನೀಡಲಿ. ಈ ಬಗ್ಗೆ ಮಾಹಿತಿ ಬಂದಿದ್ದು, ಗಮನಿಸುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

3 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

4 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

4 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

5 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

5 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

6 hours ago