Mysore
17
overcast clouds

Social Media

ಮಂಗಳವಾರ, 17 ಡಿಸೆಂಬರ್ 2024
Light
Dark

ಎಸ್ಸಿ, ಎಸ್ಟಿ ಸ್ಮಶಾನ ಒತ್ತುವರಿ ಪ್ರಕರಣ: ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದ ಸಚಿವ ಎಚ್.ಸಿ.ಮಹದೇವಪ್ಪ

ಹನೂರು: ಹನೂರು ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿದ್ದ ಸ್ಮಶಾನದ ಜಾಗದಲ್ಲಿ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವ ಎಚ್.ಸಿ.ಮಹದೇವಪ್ಪ ಅವರು, ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಪತ್ರದಲ್ಲಿ ಉಲ್ಲೇಖಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿದ್ದ ಸ್ಮಶಾನವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಅನುಮತಿಯನ್ನು ಸಹ ಕೊಡಲಾಗಿದೆ. ಸದರಿ ವ್ಯಕ್ಯಿಗಳ ವಿರುದ್ಧ ಸೂಕ್ತ ತನಿಖೆ ಮಾಡಿಸಿ, ತನಿಖೆ ಬಳಿಕ ತಪ್ಪಿತಸ್ಥರಿಗೆ ಕಠಿಣ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಿರೇಕಾಟಿ ಗ್ರಾಮಸ್ಥರ ಮನವಿ ಮೇರೆಗೆ ಸಚಿವ ಎಚ್.ಸಿ.ಮಹದೇವಪ್ಪ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ಗ್ರಾಮಸ್ಥರು ನ್ಯಾಯ ಸಿಗುವ ವಿಶ್ವಾಸದಲ್ಲಿದ್ದಾರೆ.

 

Tags: