ಹನೂರು: ಹನೂರು ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿದ್ದ ಸ್ಮಶಾನದ ಜಾಗದಲ್ಲಿ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವ ಎಚ್.ಸಿ.ಮಹದೇವಪ್ಪ ಅವರು, ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಪತ್ರದಲ್ಲಿ ಉಲ್ಲೇಖಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿದ್ದ ಸ್ಮಶಾನವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಅನುಮತಿಯನ್ನು ಸಹ ಕೊಡಲಾಗಿದೆ. ಸದರಿ ವ್ಯಕ್ಯಿಗಳ ವಿರುದ್ಧ ಸೂಕ್ತ ತನಿಖೆ ಮಾಡಿಸಿ, ತನಿಖೆ ಬಳಿಕ ತಪ್ಪಿತಸ್ಥರಿಗೆ ಕಠಿಣ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹಿರೇಕಾಟಿ ಗ್ರಾಮಸ್ಥರ ಮನವಿ ಮೇರೆಗೆ ಸಚಿವ ಎಚ್.ಸಿ.ಮಹದೇವಪ್ಪ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ಗ್ರಾಮಸ್ಥರು ನ್ಯಾಯ ಸಿಗುವ ವಿಶ್ವಾಸದಲ್ಲಿದ್ದಾರೆ.
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳ ಸಂಖ್ಯೆ ಹೆಚ್ಚಳ ಮೈಸೂರು: ಬಹುತೇಕ ಮಕ್ಕಳು ಹೆತ್ತವರ ಮಡಿಲಲ್ಲಿ,…
ಎಚ್.ಎಸ್.ದಿನೇಶ್‌ಕುಮಾರ್ ಅರಮನೆಗೆ ಹೊಂದಿಕೊಂಡಂತಿರುವ ಕಟ್ಟಡ; ಚಾವಣಿಯ ಒಂದು ಭಾಗದಲ್ಲಿ ದೊಡ್ಡ ಬಿರುಕು ಕಟ್ಟಡದ ದುಸ್ಥಿತಿಯ ಬಗ್ಗೆ ಪುರಾತತ್ವ ಇಲಾಖೆ ಗಮನಕ್ಕೆ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಆದೇಶದಂತೆ ಮೈಸೂರು ನಗರ ಡಿಸಿಪಿ ಮುತ್ತುರಾಜು ನನ್ನ ವಿರುದ್ಧ ಕೆ.ಆರ್ ಠಾಣೆಯಲ್ಲಿ ದುರುದ್ದೇಶಪೂರ್ವಕವಾಗಿ ಪ್ರಕರಣ…
ಬೆಳಗಾವಿ: ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆಗೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ…
ಹೊಸದಿಲ್ಲಿ: ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ಮಂಗಳವಾರ ಭಾವಪೂರ್ಣವಾಗಿ…
ಬೆಳಗಾವಿ : ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ…