Mysore
23
overcast clouds
Light
Dark

ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು: ಬಿ.ವೈ.ವಿಜಯೇಂದ್ರಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರಶ್ನೆ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಸದ್ಯದಲ್ಲೇ ರಾಜೀನಾಮೆ ಕೊಡ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.

ಈ ಬಗ್ಗೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, ಜನರು 136 ಸೀಟು ಗೆಲ್ಲಿಸಿರೋದು ವಿಜಯೇಂದ್ರ ರಾಜೀನಾಮೆ ಕೇಳಿದ ತಕ್ಷಣ ಕೊಡೋದಕ್ಕ ಎಂದು ಪ್ರಶ್ನಿಸಿದರು.

ವಿಜಯೇಂದ್ರ, ಯಡಿಯೂರಪ್ಪ, ಅಶೋಕ್‌, ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ಶಶಿಕಲಾ ಜೊಲ್ಲೆ ಸೇರಿದಂತೆ ಅನೇಕರ ಮೇಲೆ ಸಾಕಷ್ಟು ಕೇಸ್‌ಗಳಿವೆ. ಮೊದಲು ಅವರ ಮನೆ ಶುದ್ದಿ ಮಾಡಿಕೊಳ್ಳಲಿ. ತದನಂತರ ಕಾಂಗ್ರೆಸ್‌ ಪಕ್ಷದ ಬಗ್ಗೆ ಮಾತನಾಡಲಿ ಎಂದು ಕಿಡಿಕಾರಿದರು.

ಸಿಎಂ ಸಾರ್ವಜನಿಕ ಜೀವನಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ ನಡೆಯುತ್ತಿದ್ದು, ಕೋಮುವಾದಿಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಆಗಬಾರದು ಎಂಬುದು ಅವರ ಆಸೆ. ಬಿಜೆಪಿ, ಜೆಡಿಎಸ್‌ ಹಾಗೂ ಕೇಂದ್ರ ಸರ್ಕಾರ ಎಲ್ಲಾ ಸೇರಿ ರಾಜಕೀಯ ಪಿತೂರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ. ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಮುಡಾ ಹಗರಣದಲ್ಲಿ ಅವರು ಏನೂ ತಪ್ಪು ಮಾಡಿಲ್ಲ ಎಂದು ಸಿಎಂ ಸಿದ್ದು ಪರ ಬ್ಯಾಟ್‌ ಮಾಡಿದರು.