ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಸದ್ಯದಲ್ಲೇ ರಾಜೀನಾಮೆ ಕೊಡ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.
ಈ ಬಗ್ಗೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, ಜನರು 136 ಸೀಟು ಗೆಲ್ಲಿಸಿರೋದು ವಿಜಯೇಂದ್ರ ರಾಜೀನಾಮೆ ಕೇಳಿದ ತಕ್ಷಣ ಕೊಡೋದಕ್ಕ ಎಂದು ಪ್ರಶ್ನಿಸಿದರು.
ವಿಜಯೇಂದ್ರ, ಯಡಿಯೂರಪ್ಪ, ಅಶೋಕ್, ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ಶಶಿಕಲಾ ಜೊಲ್ಲೆ ಸೇರಿದಂತೆ ಅನೇಕರ ಮೇಲೆ ಸಾಕಷ್ಟು ಕೇಸ್‌ಗಳಿವೆ. ಮೊದಲು ಅವರ ಮನೆ ಶುದ್ದಿ ಮಾಡಿಕೊಳ್ಳಲಿ. ತದನಂತರ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲಿ ಎಂದು ಕಿಡಿಕಾರಿದರು.
ಸಿಎಂ ಸಾರ್ವಜನಿಕ ಜೀವನಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ ನಡೆಯುತ್ತಿದ್ದು, ಕೋಮುವಾದಿಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಆಗಬಾರದು ಎಂಬುದು ಅವರ ಆಸೆ. ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರ ಸರ್ಕಾರ ಎಲ್ಲಾ ಸೇರಿ ರಾಜಕೀಯ ಪಿತೂರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ. ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಮುಡಾ ಹಗರಣದಲ್ಲಿ ಅವರು ಏನೂ ತಪ್ಪು ಮಾಡಿಲ್ಲ ಎಂದು ಸಿಎಂ ಸಿದ್ದು ಪರ ಬ್ಯಾಟ್ ಮಾಡಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…