Mysore
14
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಧರ್ಮಸ್ಥಳ ಪ್ರಕರಣ: ನಾಳೆ ಸದನದಲ್ಲಿ ಉತ್ತರ ನೀಡುತ್ತೇನೆ ಎಂದ ಸಚಿವ ಪರಮೇಶ್ವರ್‌

There is no financial shortage in the government Minister G Parameshwara

ಚಾಮರಾಜನಗರ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸದನದಲ್ಲಿಯೇ ಉತ್ತರ ನೀಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ.

ಈ ಕುರಿತು ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೂ ಕೂಡ ರಾಜಕೀಯ ಮಾಡಬಾರದು. ಎಸ್‌ಐಟಿ ತನಿಖೆ ನಡೆಯುತ್ತಿದೆ. ಈ ವಿಚಾರವಾಗಿ ನಾವು ಯಾರೂ ಕೂಡ ಹಸ್ತಕ್ಷೇಪ ಮಾಡುವುದಿಲ್ಲ ಈಗಾಗಲೇ ಸಿಎಂ ಸಿದ್ದರಾಮಯ್ಯ ಕೂಡ ಹೇಳಿದ್ದಾರೆ. ನಾನು ಕೂಡ ಪದೇ ಪದೇ ಹೇಳುತ್ತಿದ್ದೇನೆ. ತನಿಖೆ ನಡೆಸುತ್ತಿದ್ದಾಗ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರು ರಾಜಕೀಯದ ದೃಷ್ಟಿಯಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಲ್ಲಿ ಧಾರ್ಮಿಕ ವಿಚಾರವಾಗಿ ಚರ್ಚೆಯಲ್ಲ. ಒಬ್ಬ ವ್ಯಕ್ತಿ ದೂರು ನೀಡಿದಾಗ ತನಿಖೆ ನಡೆಸಲಾಗುತ್ತದೆ. ಅದೇ ರೀತಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ತನಿಖೆ ನಡೆಸಿದ ಬಳಿಕ ಸತ್ಯಾಸತ್ಯತೆ ಏನೆಂಬುದು ಹೊರಬರಲಿದೆ ಎಂದು ಹೇಳಿದರು.

ಇನ್ನು ನಾಳೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿಯೇ ಉತ್ತರ ನೀಡುತ್ತೇನೆ ಎಂದು ಸ್ಪಷ್ಟನೆ ನೀಡಿದರು.

Tags:
error: Content is protected !!