There is no financial shortage in the government Minister G Parameshwara
ಚಾಮರಾಜನಗರ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸದನದಲ್ಲಿಯೇ ಉತ್ತರ ನೀಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೂ ಕೂಡ ರಾಜಕೀಯ ಮಾಡಬಾರದು. ಎಸ್‌ಐಟಿ ತನಿಖೆ ನಡೆಯುತ್ತಿದೆ. ಈ ವಿಚಾರವಾಗಿ ನಾವು ಯಾರೂ ಕೂಡ ಹಸ್ತಕ್ಷೇಪ ಮಾಡುವುದಿಲ್ಲ ಈಗಾಗಲೇ ಸಿಎಂ ಸಿದ್ದರಾಮಯ್ಯ ಕೂಡ ಹೇಳಿದ್ದಾರೆ. ನಾನು ಕೂಡ ಪದೇ ಪದೇ ಹೇಳುತ್ತಿದ್ದೇನೆ. ತನಿಖೆ ನಡೆಸುತ್ತಿದ್ದಾಗ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರು ರಾಜಕೀಯದ ದೃಷ್ಟಿಯಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಲ್ಲಿ ಧಾರ್ಮಿಕ ವಿಚಾರವಾಗಿ ಚರ್ಚೆಯಲ್ಲ. ಒಬ್ಬ ವ್ಯಕ್ತಿ ದೂರು ನೀಡಿದಾಗ ತನಿಖೆ ನಡೆಸಲಾಗುತ್ತದೆ. ಅದೇ ರೀತಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ತನಿಖೆ ನಡೆಸಿದ ಬಳಿಕ ಸತ್ಯಾಸತ್ಯತೆ ಏನೆಂಬುದು ಹೊರಬರಲಿದೆ ಎಂದು ಹೇಳಿದರು.
ಇನ್ನು ನಾಳೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿಯೇ ಉತ್ತರ ನೀಡುತ್ತೇನೆ ಎಂದು ಸ್ಪಷ್ಟನೆ ನೀಡಿದರು.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…