minister venkatesh
ಹನೂರು: ತಾಲ್ಲೂಕಿನ ಪ್ರಸಿದ್ದ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಮುಗಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಸೂಚನೆ ನೀಡಿದರು.
ಮಲೆ ಮಹದೇಶ್ವರ ಬೆಟ್ಟಕ್ಕೆ ಕುಟುಂಬ ಸಮೇತ ಆಗಮಿಸಿ ಮಹದೇಶ್ವರನ ದರ್ಶನ ಪಡೆದು ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ಲೋಪದೋಷಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಪರಿಶೀಲನೆ ನಡೆಸಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ 45 ಕೋಟಿ ವೆಚ್ಚದಲ್ಲಿ ತಿರುಪತಿ ಮಾದರಿಯಲ್ಲಿ ಎಂಟು ಬ್ಲಾಕ್ (ಕ್ಯೂ ಲೈನ್) ನಿರ್ಮಾಣ ಮಾಡಿ ಪ್ರತಿಯೊಂದು ಬ್ಲಾಕ್‌ಗಳಲ್ಲಿ ಸುಮಾರು 500 ಜನರು ಕೂರಲು ಆಸನದ ವ್ಯವಸ್ಥೆ, ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರತಿಯೊಂದು ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಯಾವುದಾದರೂ ಸಮಸ್ಯೆಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ. ಈ ಕಾಮಗಾರಿಯನ್ನು ಆಗಸ್ಟ್ ತಿಂಗಳೊಳಗೆ ಪೂರ್ಣಗೊಳಿಸಿ ಮುಂಬರುವ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆ ಪ್ರಸ್ತುತ ಇರುವ ದಾಸೋಹ ಭವನದಲ್ಲಿ ಹೆಚ್ಚಿನ ಭಕ್ತಾದಿಗಳು ಒಮ್ಮೆಲೆ ಪ್ರಸಾದ ಸ್ವೀಕರಿಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆ ಹಳೆ ದಾಸೋಹ ಭವನದ ಮುಂಭಾಗ 90 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ದಾಸೋಹ ಭವನ ನಿರ್ಮಾಣ ಮಾಡಲಾಗುತ್ತಿದೆ. ಒಂದೇ ಬಾರಿಗೆ ನಾಲ್ಕು ಸಾವಿರ ಭಕ್ತಾದಿಗಳು ಪ್ರಸಾದ ಸ್ವೀಕರಿಸಲು ಅನುಕೂಲವಾಗುವಂತೆ ಕಟ್ಟಡದ ವಿನ್ಯಾಸ ಮಾಡಲಾಗಿದೆ. ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಅನುಮೋದನೆ ಪಡೆದುಕೊಳ್ಳಲಾಗಿದ್ದು, ಟೆಂಡರ್ ಹಂತದಲ್ಲಿರುವುದರಿಂದ ಮುಂದಿನ ಪ್ರಕ್ರಿಯೆಯನ್ನು ಅತಿ ಶೀಘ್ರವೇ ಮುಗಿಸಬೇಕು ಎಂದರು.
ಪೌರಕಾರ್ಮಿಕರಿಗೆ ಮನೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ: ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ 60 ಪೌರಕಾರ್ಮಿಕರಿಗೆ ಮನೆ ನಿರ್ಮಾಣ ಮಾಡಲು ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮನೆ ನಿರ್ಮಾಣ ಮಾಡಿಕೊಡಲು ಅಂದಾಜು ಪಟ್ಟಿ ತಯಾರು ಮಾಡಿ ವರದಿ ನೀಡುವಂತೆ ಸೂಚನೆ ನೀಡಿದರು.
20 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಡಾರ್ಮೆಟರಿ ಹಾಗೂ ವಿವಿಧ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ವೇಳೆ ಕಾರ್ಯದರ್ಶಿ ಎಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಪಾರುಪತ್ತೆದಾರ ಮಹಾಲಿಂಗನ ಕಟ್ಟೆ ಮಹದೇವಸ್ವಾಮಿ, ಆಗಮಿಕರು ಹಾಗೂ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…