ಚಾಮರಾಜನಗರ

ಹನೂರು| ನಿಗದಿತ ಸಮಯದೊಳಗೆ ಅಭಿವೃದ್ಧಿ ಕಾಮಗಾರಿ ಮುಗಿಸಿ: ಸಚಿವ ವೆಂಕಟೇಶ್‌ ಸೂಚನೆ

ಹನೂರು: ತಾಲ್ಲೂಕಿನ ಪ್ರಸಿದ್ದ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಮುಗಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಸೂಚನೆ ನೀಡಿದರು.

ಮಲೆ ಮಹದೇಶ್ವರ ಬೆಟ್ಟಕ್ಕೆ ಕುಟುಂಬ ಸಮೇತ ಆಗಮಿಸಿ ಮಹದೇಶ್ವರನ ದರ್ಶನ ಪಡೆದು ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ಲೋಪದೋಷಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಪರಿಶೀಲನೆ ನಡೆಸಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ 45 ಕೋಟಿ ವೆಚ್ಚದಲ್ಲಿ ತಿರುಪತಿ ಮಾದರಿಯಲ್ಲಿ ಎಂಟು ಬ್ಲಾಕ್ (ಕ್ಯೂ ಲೈನ್) ನಿರ್ಮಾಣ ಮಾಡಿ ಪ್ರತಿಯೊಂದು ಬ್ಲಾಕ್‌ಗಳಲ್ಲಿ ಸುಮಾರು 500 ಜನರು ಕೂರಲು ಆಸನದ ವ್ಯವಸ್ಥೆ, ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರತಿಯೊಂದು ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಯಾವುದಾದರೂ ಸಮಸ್ಯೆಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ. ಈ ಕಾಮಗಾರಿಯನ್ನು ಆಗಸ್ಟ್ ತಿಂಗಳೊಳಗೆ ಪೂರ್ಣಗೊಳಿಸಿ ಮುಂಬರುವ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆ ಪ್ರಸ್ತುತ ಇರುವ ದಾಸೋಹ ಭವನದಲ್ಲಿ ಹೆಚ್ಚಿನ ಭಕ್ತಾದಿಗಳು ಒಮ್ಮೆಲೆ ಪ್ರಸಾದ ಸ್ವೀಕರಿಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆ ಹಳೆ ದಾಸೋಹ ಭವನದ ಮುಂಭಾಗ 90 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ದಾಸೋಹ ಭವನ ನಿರ್ಮಾಣ ಮಾಡಲಾಗುತ್ತಿದೆ. ಒಂದೇ ಬಾರಿಗೆ ನಾಲ್ಕು ಸಾವಿರ ಭಕ್ತಾದಿಗಳು ಪ್ರಸಾದ ಸ್ವೀಕರಿಸಲು ಅನುಕೂಲವಾಗುವಂತೆ ಕಟ್ಟಡದ ವಿನ್ಯಾಸ ಮಾಡಲಾಗಿದೆ. ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಅನುಮೋದನೆ ಪಡೆದುಕೊಳ್ಳಲಾಗಿದ್ದು, ಟೆಂಡರ್ ಹಂತದಲ್ಲಿರುವುದರಿಂದ ಮುಂದಿನ ಪ್ರಕ್ರಿಯೆಯನ್ನು ಅತಿ ಶೀಘ್ರವೇ ಮುಗಿಸಬೇಕು ಎಂದರು.

ಪೌರಕಾರ್ಮಿಕರಿಗೆ ಮನೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ: ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ 60 ಪೌರಕಾರ್ಮಿಕರಿಗೆ ಮನೆ ನಿರ್ಮಾಣ ಮಾಡಲು ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮನೆ ನಿರ್ಮಾಣ ಮಾಡಿಕೊಡಲು ಅಂದಾಜು ಪಟ್ಟಿ ತಯಾರು ಮಾಡಿ ವರದಿ ನೀಡುವಂತೆ ಸೂಚನೆ ನೀಡಿದರು.

20 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಡಾರ್ಮೆಟರಿ ಹಾಗೂ ವಿವಿಧ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ವೇಳೆ ಕಾರ್ಯದರ್ಶಿ ಎಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಪಾರುಪತ್ತೆದಾರ ಮಹಾಲಿಂಗನ ಕಟ್ಟೆ ಮಹದೇವಸ್ವಾಮಿ, ಆಗಮಿಕರು ಹಾಗೂ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

6 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

6 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

7 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

7 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

7 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

7 hours ago