ಮೈಸೂರು: ಮಾಜಿ ರಾಜ್ಯಪಾಲ ದಿವಂಗತ ಬಿ. ರಾಚಯ್ಯ ಅವರ ಪತ್ನಿ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರ ತಾಯಿ ಗೌರಮ್ಮ ಅವರು ಶುಕ್ರವಾರ ಬೆಳಿಗ್ಗೆ ಮೈಸೂರು ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಇಬ್ಬರು ಪುತ್ರರು, ಐವರು ಪುತ್ರಿಯರು ಇದ್ದಾರೆ.
ಮೈಸೂರಿನ ಸರಸ್ವತಿಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಮಧ್ಯಾಹ್ನದ ನಂತರ ಹುಟ್ಟೂರು ಚಾಮರಾಜನಗರ ಜಿಲ್ಲೆಯ ಆಲೂರಿರಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ.
ಫೆ.1 ರಂದು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.