ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಶಾಸಕ ಎಂ.ಆರ್.ಮಂಜುನಾಥ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪದಿಂದ ಬಂಡಳ್ಳಿ ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಳ್ಳ ಕೊಳ್ಳಗಳಿಂದ ಕೂಡಿದ್ದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಸಂಚರಿಸಲು ತೊಂದರೆಯಾಗಿತ್ತು. ಇದಲ್ಲದೆ ಹಲವಾರು ಅಪಘಾತಗಳಾಗಿ ಸಾವು ನೋವುಗಳು ಸಹ ಸಂಭವಿಸಿತ್ತು. ಇದಲ್ಲದೆ ಗರ್ಭಿಣಿಯೊಬ್ಬರಿಗೆ ಗರ್ಭಪಾತವೂ ಸಹ ಆಗಿ ಹಲವಾರು ಜನರು ಕೈಕಾಲು ಮುರಿದುಕೊಂಡಿದ್ದರು.
ಚುನಾವಣಾ ಪೂರ್ವದಲ್ಲಿ ಮಣಗಳ್ಳಿ, ಬಂಡಳ್ಳಿ, ಅಲಗಾಪುರ ಗ್ರಾಮಗಳಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಶಾಸಕ ಎಂಆರ್ ಮಂಜುನಾಥ್ ರವರು ಹನೂರು ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಶಾಸಕರಾಗಿ ಆಯ್ಕೆಯಾದ ನಂತರ ರಸ್ತೆ ಅಭಿವೃದ್ಧಿಯನ್ನು ಮಾಡಲು ಕಳೆದ ಹಲವಾರು ತಿಂಗಳ ಹಿಂದೆ ಭೂಮಿ ಪೂಜೆ ನೆರವೇರಿಸಿದ್ದರು.
ಇದೀಗ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಶಾಸಕ ಎಂಆರ್ ಮಂಜುನಾಥ್ ಭೇಟಿ ನೀಡಿ ಆತೀ ಶೀಘ್ರದಲ್ಲಿಯೇ ಪಟ್ಟಣ ವ್ಯಾಪ್ತಿಯಲ್ಲಿ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ರಸ್ತೆಯಲ್ಲಿ ಸಂಚರಿಸುವುದರಿಂದ ಪ್ರತಿನಿತ್ಯ ನೀರು ಹಾಕಿ ದೂಳು ಬಾರದಂತೆ ಕ್ರಮ ವಹಿಸಬೇಕು ಎಂದು ತಾಕೀತು ಮಾಡಿದರು.
ಈ ವೇಳೆ ಶಾಸಕರು ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿಗಳಿಗೆ ಸೂಚನೆ ನೀಡಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…
ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…
ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…