ಚಾಮರಾಜನಗರ

ಸಾಣೇಹಳ್ಳಿ ಸ್ವಾಮೀಜಿ ಹೇಳಿಕೆ ಬಗ್ಗೆ ಶಾಸಕ ಯತ್ನಾಳ್ ಪ್ರತಿಕ್ರಿಯೆ

ಚಾಮರಾಜನಗರ : ಗಣಪತಿ ಪೂಜೆ ವಿಚಾರದಲ್ಲಿ ಸಾಣೇಹಳ್ಳಿ ಪಂಡಿತಾರಾದ್ಯ ಶ್ರೀಗಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಯತ್ನಾಳ್, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗೆ ಹೊಸದುರ್ಗ ತಾಲೂಕಿನ ಸಾಣೆಹಳ್ಳಿಯಲ್ಲಿ ಮಾತನಾಡಿದ್ದ ಶಿವಾಚಾರ್ಯ ಸ್ವಾಮೀಜಿ, ʼʼವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ ವಚನಗಳನ್ನು ಪಠಿಸಬೇಕುʼʼ ಎಂದು ಹೇಳಿದ್ದರು.

ಈ ಕುರಿತು ಇಂದು (ಸೋಮವಾರ) ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ”ನಮ್ಮಲ್ಲಿ ಕೆಲವರು ಸ್ವಾಮೀಜಿಗಳು ಕಮ್ಯೂನಿಸ್ಟ್ ಅಥವಾ ನಕ್ಸಲೈಟ್ ಆಗಬೇಕಿತ್ತು. ದುರ್ದೈವದಿಂದ ನಮ್ಮ ಖಾವಿ ಹಾಕಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

”ರಾಜ್ಯೋತ್ಸವ ಪ್ರಶಸ್ತಿಗಾಗಿ ಕೆಲವು ಮಠಾಧೀಶರು ಹಿಂದೂ ವಿರೋಧಿ ಹೇಳಿಕೆ ಕೊಡುತ್ತಾರೆ. ಅಲ್ಲದೇ, ಕೋಟಿ ಕೋಟಿ ಅನುದಾನಕ್ಕಾಗಿ ಈ ರೀತಿ ಮಾತನಾಡುತ್ತಾರೆ ” ಎಂದು ಆರೋಪಿಸಿದರು.

ಇತ್ತೀಚೆಗೆ ವಿಶ್ವವಾಣಿ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌, ”ಸಾಣೇಹಳ್ಳಿ ಸ್ವಾಮೀಜಿ ನಾಟಕ ಮಾಡಿಕೊಂಡು ಆರಾಮಿರಲಿ. ದೇವರ ತಂಟೆ ಬೇಡʼʼ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಪೋಸ್ಟ್ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಶಾಸಕ ಯತ್ನಾಳ್ ಸ್ವಾಮೀಜಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago