ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂದಿನ ತಿಂಗಳಿನಿಂದ ನಡೆಯಲಿರುವ ಜಾತ್ರಾ ಮಹೋತ್ಸವ ಸಂಬಂಧ ಪ್ರಗತಿ ಕಾಮಗಾರಿಗಳನ್ನು ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಪರಿಶೀಲನೆ ನಡೆಸಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ ಒಂದರಿಂದ ಮೂರು ದಿನಗಳ ಕಾಲ ಮಹಾಲಯ ಅಮಾವಾಸ್ಯೆ, ಅಕ್ಟೋಬರ್ 3 ರಿಂದ ನವರಾತ್ರಿ ಪ್ರಾರಂಭ, 11ರಂದು ಮಹಾನವಮಿ ಆಯುಧ ಪೂಜೆ, 12 ವಿಜಯದಶಮಿ ನವರಾತ್ರಿ ಆಚರಣೆ, ಅಕ್ಟೋಬರ್ 29ರಿಂದ 5 ದಿನಗಳ ಕಾಲ ದೀಪಾವಳಿ ಅಮಾವಾಸ್ಯೆ, ಜಾತ್ರಾ ಮಹೋತ್ಸವ, ನವೆಂಬರ್ 4ರಿಂದ ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಮಂದಿ ಆಗಮಿಸುವ ನಿರೀಕ್ಷೆ ಇರುವುದರಿಂದ, ಜಾತ್ರಾ ಮಹೋತ್ಸವದ ವೇಳೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಮಾಡಲು ಸಾಧ್ಯವಾಗದೇ ಇರುವುದರಿಂದ ಆದಷ್ಟು ಬೇಗ ಜಾತ್ರಾ ಮಹೋತ್ಸವದ ಒಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
500 ರೂ ವಿಶೇಷ ದರ್ಶನದ ಕ್ಯೂ ಲೈನ್ ಪರಿಶೀಲನೆ: ಅಕ್ಟೋಬರ್ ಒಂದರಿಂದ ಮೂರು ದಿನಗಳ ಕಾಲ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಲಕ್ಷಾಂತರ ಜನರು ಆಗಮಿಸುತ್ತಾರೆ. ರಾಜಗೋಪುರ ಮುಂಭಾಗದಲ್ಲಿರುವ ವಿಶೇಷ ದರ್ಶನದ ಕ್ಯೂ ಲೈನ್ ನಲ್ಲಿ ಬರುವವರಿಗೆ ಯಾವುದೇ ನೂಕು ನುಗ್ಗಲು ಆಗದಂತೆ ಹಾಗೂ ನೆರಳಿನ ವ್ಯವಸ್ಥೆ ಮಾಡಲು ಕಿರಿಯ ಅಭಿಯಂತರ ಸೆಲ್ವ ಗಣಪತಿರವರ ಜೊತೆ ಚರ್ಚೆ ನಡೆಸಿ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು.
ಪ್ರವಾಸಿಗರಿಗೆ ಸೌಲಭ್ಯ ಕಲ್ಪಿಸಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಬಹುತೇಕರು ಧರ್ಮ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಲ್ಲುವ ವೇಳೆ ಫ್ಯಾನ್ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸಿ ಕೊಡಬೇಕು. ದರ್ಶನಕ್ಕೆ ಯಾವುದೇ ಅಡಚಣೆಯಾಗದಂತೆ ನೆರಳಿನ ವ್ಯವಸ್ಥೆ ಹಾಗೂ ಮರಗಳನ್ನು ಕಟ್ಟಬೇಕು ಎಂದು ಸೂಚನೆ ನೀಡಿದರು.
ಅಂತರಗಂಗೆಯಲ್ಲಿ ಸ್ವಚ್ಛತೆ ಕಾಪಾಡಿ: ಶ್ರೀ ಕ್ಷೇತ್ರಕ್ಕೆ ಬರುವವರು ಅಂತರಗಂಗೆಯಲ್ಲಿ ಪೂಜೆ ಮಾಡುವುದು ಸಂಪ್ರದಾಯ ಆದರೆ ಕೆಲವರು ಇಲ್ಲೇ ಸ್ಥಾನ ಮಾಡುತ್ತಿರುವುದರಿಂದ ನೀರು ಮಲಿನವಾಗುತ್ತಿದೆ. ಈ ನಿಟ್ಟಿನಲ್ಲಿ ಜನರು ಸ್ಥಾನಗೃಹ ಹಾಗೂ ಕಲ್ಯಾಣಿಯಲ್ಲಿಯೇ ಸ್ಥಾನ ಮಾಡಬೇಕು ಅಂತರಗಂಗೆಯಲ್ಲಿ ಯಾವುದೇ ಅರಿಶಿಣ, ಕುಂಕುಮ ಕರ್ಪೂರ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹಾಕದೆ ಸ್ವಚ್ಛತೆ ಹೆಚ್ಚಿನ ಆದ್ಯತೆ ನೀಡಬೇಕು, ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೂಚನಾ ಫಲಕ ಹಾಕುವಂತೆ, ಅಧಿಕಾರಿಗಳಿಗೆ ತಿಳಿಸಿದರು.
ಎರಡು ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಶ್ರೀ ಕ್ಷೇತ್ರ ಮಹದೇಶ್ವರ ಬೆಟ್ಟದ ದಾಸೋಹ ಭವನದ ನೆಲ ಅಂತಸ್ತು ದುರಸ್ತಿ ಕಾಮಗಾರಿ ಪ್ರಾರಂಭವಾಗಿ ವರ್ಷಗಳೇ ಕಳೆಯುತ್ತಿದೆ. ಆದರೆ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ದಾಸೋಹ ಭವನಕ್ಕೆ ಬರುವವರು ಹಾಗೂ ಗಣ್ಯರಿಗೆ ತೊಂದರೆಯಾಗುತ್ತಿದೆ ಈ ನಿಟ್ಟಿನಲ್ಲಿ ಇನ್ನು ಎರಡು ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ ಅನುಕೂಲ ಕಲ್ಪಿಸಬೇಕು ಎಂದರು.
ಪ್ರತಿಮೆ ವೀಕ್ಷಣೆಗೆ ಅವಕಾಶ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದೀಪದಗಿರಿ ಓಟುವಿನಲ್ಲಿ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಆವರಣದಲ್ಲಿ ಮಾತ್ರ ಕಾಮಗಾರಿ ಬಾಕಿ ಇದ್ದು ಉಳಿದಂತೆ ಸಿಸಿ ರಸ್ತೆ, ಚರಂಡಿ, ದೀಪದ ವ್ಯವಸ್ಥೆ ಪೂರ್ಣಗೊಂಡಿದೆ. ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಪ್ರತಿಮೆ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಡಲಾಗುವುದು, ಪ್ರತಿಮೆ ಆವರಣದ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಮುಂದಿನ ತಿಂಗಳಿಂದ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ, ನವರಾತ್ರಿ ಉತ್ಸವ, ದೀಪಾವಳಿ ಜಾತ್ರಾ ಮಹೋತ್ಸವ ಕಾರ್ತಿಕ ಮಾಸ ಜಾತ್ರೆಗೆ ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಪ್ರಾಧಿಕಾರದ ವತಿಯಿಂದ ನಿರಂತರವಾಗಿ ಮೂಲಭೂತ ಸೌಲಭ್ಯ ಕಲ್ಪಿಸಲಾಗುತ್ತಿದೆ. – ಎಇ ರಘು, ಕಾರ್ಯದರ್ಶಿ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…