ಚಾಮರಾಜನಗರ

ಹನೂರು| ಹಣ ಡಬ್ಲಿಂಗ್‌ ಮಾಡಲು ಹೊರಟಿದ್ದ ಆರೋಪಿಗಳ ಬಂಧನ

ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹನೂರು ತಾಲೂಕಿನ ದಂಟಳ್ಳಿ ಗ್ರಾಮದ ಶೇಖರ್, ಚಾಮರಾಜನಗರ ತಾಲ್ಲೂಕಿನ ಸಂತೆಮರಳ್ಳಿ ಗ್ರಾಮದ ಮಾದೇಶ್, ಸುಖೇಶ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆ ವಿವರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಇಂದು ಸಂಜೆ ಆನೆ ತಲೆ ದಿಂಬದ ಬಳಿ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದಾಗ, ಪೊಲೀಸರ ವಾಹನ ಕಂಡು ಗ್ರಾಂಡ್ ವಿಟ್ರಾ ಕಾರಿನ ಚಾಲಕ ಕಾರು ನಿಲ್ಲಿಸಿ ಪರಾರಿಯಾಗಿದ್ದಾನೆ. ಅನುಮಾನಗೊಂಡ ಪೊಲೀಸರು ಕಾರು ಸುತ್ತುವರಿದು ಕಾರಿನಲ್ಲಿದ್ದ ಆರೋಪಿ ಶೇಖರ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪರಿಶೀಲನೆ ವೇಳೆ ಕಾರಿನ ಒಳಗೆ ಒಂದು ಬ್ಯಾಗಿನಲ್ಲಿ 500 ನೋಟುಗಳಿಗೆ ಹೋಲುವ ಕಪ್ಪು ಬಣ್ಣದ 370 ಬಂಡಲ್ ಪೇಪರ್ ಕಟ್ಟುಗಳಿದ್ದು, ಒಂದು ಬಂಡಲ್ ನಲ್ಲಿ 100 ಹಾಳೆಗಳು, ಎರಡು ಖಾಲಿ ಬ್ಯಾಗ್, ನೋಟುಗಳು ಎಣಿಸುವ ಮಿಷನ್ ಪತ್ತೆಯಾಗಿದೆ. ಬಂಧಿತ ಆರೋಪಿಯಿಂದ 500 ರೂ ಬೆಲೆಯ 1,11,500 ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಜಗದೀಶ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಾಪತ್ತೆಯಾಗಿರುವ ಇಬ್ಬರು ಆರೋಪಿಗಳನ್ನು ಬಂಧಿಸಲು ಈಗಾಗಲೇ ತಂಡ ರಚನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

 

 

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

15 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

15 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

16 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

16 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

16 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

17 hours ago