Mysore
21
mist

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಸುನಿಲ್‌ ಬೋಸ್‌ಗೆ ಸಂಸದ ಶ್ರೀನಿವಾಸ್‌ ಪ್ರಸಾದ್‌ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ : ಡಿಕೆಶಿ

ಚಾಮರಾಜನಗರ : ಸುನಿಲ್‌ ಬೋಸ್‌ಗೆ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್‌ ಬೆಂಬಲ ಕೊಟ್ಟು ಆಶಿರ್ವಾದ ಮಾಡಿ ಕಳಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಲೋಕಸಭಾ ಚುನಾವಣೆ ಹಿನ್ನಲೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ನಾಮಪತ್ರ ಸಲ್ಲಿಕೆಗು ಮುನ್ನ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಚಾಮರಾಜನಗರದ ಹಾಲಿ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್‌ ಅವರು ಸುನಿಲ್‌ ಬೋಸ್‌ಗೆ ಆಶಿರ್ವಾದ ಮಾಡಿ ಕಳಿಸಿದ್ದಾರೆ ಎಂದರು.

ಶ್ರೀನಿವಾಸ ಪ್ರಸಾದ್‌ ಅವರ ಬೆಂಬಲ, ಅವರ ಹಿತೈಶಿಗಳ ಬೆಂಬಲ ಹಾಗೂ ಅವರ ಪಕ್ಷದ ಎಲ್ಲಾ ಕಾರ್ಯಕರ್ತರುಗಳ ಬೆಂಬಲವನ್ನು ಕೊಟ್ಟು ಸುನಿಲ್‌ ಬೋಸ್‌ರನ್ನು ಲೋಕಸಭಾ ಚುನಾವಣೆಗೆ ಕಳಿಸಿಕೊಟ್ಟಿದ್ದಾರೆ.

ಹೀಗಾಗಿ ಕ್ಷೇತ್ರದ ಎಲ್ಲಾ ಮತದಾರರು ನಮ್ಮ ಅಭ್ಯರ್ಥಿ ಸುನಿಲ್‌ ಬೋಸ್‌ ಅವರಿಗೆ ಹೆಚ್ಚಿನ ಮತ ನೀಡುವ ಮೂಲಕ ಗೆಲ್ಲಿಸಬೇಕು ಎಂದು ಡಿಕೆಶಿ ಮನವ ಮಾಡಿದರು.

Tags:
error: Content is protected !!